Isaiah · chapter 64 · verse 8
Isaiah 64:8 in Kannada
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
Aadare eega o kartane, namma tandeyu neene; naavu mannu, neenu namma kumbaaranu; naave llaroo ninna kaikelasave.
Isaiah 64:8 in English
- King James Version (KJV)
- But now, O LORD, thou [art] our father; we [are] the clay, and thou our potter; and we all [are] the work of thy hand.
- World English Bible (WEB)
- But now, LORD, you are our Father. We are the clay and you our potter. We all are the work of your hand.
- American Standard Version (ASV)
- But now, O Jehovah, thou art our Father; we are the clay, and thou our potter; and we all are the work of thy hand.
- Bible in Basic English (BBE)
- But now, O Lord, you are our father; we are the earth, and you are our maker; and we are all the work of your hand.
- Darby Translation (DBY)
- And now, Jehovah, thou art our Father; we are the clay, and thou our potter; and we all are the work of thy hand.
- Webster's Bible (WBS)
- But now, O LORD, thou [art] our father; we [are] the clay, and thou our potter; and we all [are] the work of thy hand.
- Young's Literal Translation (YLT)
- And now, O Jehovah, thou [art] our Father, We [are] the clay, and Thou our Framer, And the work of Thy hand — all of us.
Read in context
- 6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- 7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
- 8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- 9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- 10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
Cross references
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Psalm 119:73 ಕೀರ್ತನೆಗಳು 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- Jeremiah 18:2–6 ಯೆರೆಮೀಯ 18:2–6ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ. ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು. ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
- Psalm 138:8 ಕೀರ್ತನೆಗಳು 138:8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Isaiah 29:16 ಯೆಶಾಯ 29:16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Isaiah 63:16 ಯೆಶಾಯ 63:16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Isaiah 44:21 ಯೆಶಾಯ 44:21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
- Romans 9:20–24 ರೋಮಾಪುರದವರಿಗೆ 9:20–24ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?