Isaiah · chapter 65 · verse 11
Isaiah 65:11 in Kannada
ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
Aadare kartanannu bittavare, neevu nanna pari shuddha parvatavannu maretavare, sainyakke mejannu siddhamaadi avarige paanadarpane maaduvavare aagiddeeri.
Isaiah 65:11 in English
- King James Version (KJV)
- But ye [are] they that forsake the LORD, that forget my holy mountain, that prepare a table for that troop, and that furnish the drink offering unto that number.
- World English Bible (WEB)
- “But you who forsake the LORD, who forget my holy mountain, who prepare a table for Fortune, and who fill up mixed wine to Destiny;
- American Standard Version (ASV)
- But ye that forsake Jehovah, that forget my holy mountain, that prepare a table for Fortune, and that fill up mingled wine unto Destiny;
- Bible in Basic English (BBE)
- But as for you who have given up the Lord, who have no care for my holy mountain, who get ready a table for Chance, and make offerings of mixed wine to Fate;
- Darby Translation (DBY)
- But ye who forsake Jehovah, who forget my holy mountain, who prepare a table for Gad, and fill up mixed wine unto Meni:
- Webster's Bible (WBS)
- But ye [are] they that forsake the LORD, that forget my holy mountain, that prepare a table for that troop, and that furnish the drink-offering to that number.
- Young's Literal Translation (YLT)
- And ye [are] those forsaking Jehovah, Who are forgetting My holy mountain, Who are setting in array for Gad a table, And who are filling for Meni a mixture.
Read in context
- 9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- 10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- 11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- 12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
- 13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
Cross references
- Deuteronomy 32:17 ಧರ್ಮೋಪದೇಶಕಾಂಡ 32:17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Isaiah 1:28 ಯೆಶಾಯ 1:28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
- 1 Corinthians 10:20–21 1 ಕೊರಿಂಥದವರಿಗೆ 10:20–21ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Deuteronomy 29:24–25 ಧರ್ಮೋಪದೇಶಕಾಂಡ 29:24–25ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
- Isaiah 57:13 ಯೆಶಾಯ 57:13ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Isaiah 57:5–10 ಯೆಶಾಯ 57:5–10ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ? ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ. ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ. ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
- Psalm 132:13 ಕೀರ್ತನೆಗಳು 132:13ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.