Isaiah · chapter 65 · verse 12
Isaiah 65:12 in Kannada
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
Aadadarinda nimmannu kattige nemisu venu neevellaroo kolege boggikolluviri. Naanu kareyalu, neevu uttara kodalilla; naanu maatanaadalu neevu kelisikollalilla; nanna drushtiyalli kettaddannu maadidiri, naanu mechchaddannu aarisikondiri.
Isaiah 65:12 in English
- King James Version (KJV)
- Therefore will I number you to the sword, and ye shall all bow down to the slaughter: because when I called, ye did not answer; when I spake, ye did not hear; but did evil before mine eyes, and did choose [that] wherein I delighted not.
- World English Bible (WEB)
- I will destine you to the sword, and you will all bow down to the slaughter; because when I called, you didn’t answer. When I spoke, you didn’t listen; but you did that which was evil in my eyes, and chose that in which I didn’t delight.”
- American Standard Version (ASV)
- I will destine you to the sword, and ye shall all bow down to the slaughter; because when I called, ye did not answer; when I spake, ye did not hear; but ye did that which was evil in mine eyes, and chose that wherein I delighted not.
- Bible in Basic English (BBE)
- Your fate will be the sword, and you will all go down to death: because when my voice came to you, you made no answer; you did not give ear to my word; but you did what was evil in my eyes, desiring what was not pleasing to me.
- Darby Translation (DBY)
- I will even assign you to the sword, and ye shall all bow down in the slaughter; because I called, and ye did not answer, I spoke, and ye did not hear; but ye did what was evil in mine eyes, and chose that wherein I delight not.
- Webster's Bible (WBS)
- Therefore will I number you to the sword, and ye shall all bow down to the slaughter: because when I called, ye did not answer; when I spoke, ye did not hear; but did evil before my eyes, and did choose [that] in which I delighted not.
- Young's Literal Translation (YLT)
- And I have numbered you for the sword, And all of you for slaughter bow down, Because I called, and ye have not answered, I have spoken, and ye have not hearkened, And ye do the evil thing in Mine eyes, And on that which I desired not — fixed.
Read in context
- 10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- 11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- 12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
- 13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
- 14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
Cross references
- Jeremiah 7:13 ಯೆರೆಮೀಯ 7:13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Zechariah 7:11–13 ಜೆಕರ್ಯ 7:11–13ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Matthew 21:34–43 ಮತ್ತಾಯನು 21:34–43ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Deuteronomy 32:25 ಧರ್ಮೋಪದೇಶಕಾಂಡ 32:25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Isaiah 66:3–4 ಯೆಶಾಯ 66:3–4ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ. ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Proverbs 1:24–33 ಜ್ಞಾನೋಕ್ತಿಗಳು 1:24–33ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು. ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
Original words (Hebrew)
- number · H4487מָנָה mânâh
- sword · H2719חֶרֶב chereb
- down · H3766כָּרַע kâraʻ
- slaughter · H2874טֶבַח ṭebach
- called · H7121קָרָא qârâʼ
- answer · H6030עָנָה ʻânâh
- spake · H1696דָבַר dâbar
- hear · H8085שָׁמַע shâmaʻ
- did · H6213עָשָׂה ʻâsâh
- evil · H7451רַע raʻ
- eyes · H5869עַיִן ʻayin
- choose · H977בָּחַר bâchar
- delighted · H2654חָפֵץ châphêts