Isaiah · chapter 65 · verse 18
Isaiah 65:18 in Kannada
ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
Aadare naanu srushtisidavugalalli neevu santoshisi endendigoo ullaasapadiri; yaakam dare igo, naanu yeroosaleminalli ullaasa vannoo avala janaralli santoshavannoo srushtisu ttene.
Isaiah 65:18 in English
- King James Version (KJV)
- But be ye glad and rejoice for ever [in that] which I create: for, behold, I create Jerusalem a rejoicing, and her people a joy.
- World English Bible (WEB)
- But be glad and rejoice forever in that which I create; for, behold, I create Jerusalem to be a delight, and her people a joy.
- American Standard Version (ASV)
- But be ye glad and rejoice for ever in that which I create; for, behold, I create Jerusalem a rejoicing, and her people a joy.
- Bible in Basic English (BBE)
- But men will be glad and have joy for ever in what I am making; for I am making Jerusalem a delight, and her people a joy.
- Darby Translation (DBY)
- But be glad and rejoice for ever in that which I create. For behold, I create Jerusalem a rejoicing, and her people a joy.
- Webster's Bible (WBS)
- But be ye glad and rejoice for ever [in that] which I create: for behold, I create Jerusalem a rejoicing, and her people a joy.
- Young's Literal Translation (YLT)
- But joy ye, and rejoice for ever, that I [am] Creator, For, lo, I am creating Jerusalem a rejoicing, And her people a joy.
Read in context
- 16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- 17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- 18ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
- 19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- 20ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
Cross references
- Psalm 98:1–9 ಕೀರ್ತನೆಗಳು 98:1–9ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ. ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ. ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Revelation 19:1–6 ಪ್ರಕಟನೆ 19:1–6ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Isaiah 66:10–14 ಯೆಶಾಯ 66:10–14ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ. ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ, ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ. ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- Revelation 11:15–18 ಪ್ರಕಟನೆ 11:15–18ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Psalm 67:3–5 ಕೀರ್ತನೆಗಳು 67:3–5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- Psalm 96:10–13 ಕೀರ್ತನೆಗಳು 96:10–13ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Isaiah 52:7–10 ಯೆಶಾಯ 52:7–10ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು. ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- 1 Thessalonians 5:16 1 ಥೆಸಲೊನೀಕದವರಿಗೆ 5:16ಯಾವಾಗಲೂ ಸಂತೋಷಿಸಿರಿ;
- Isaiah 12:4–6 ಯೆಶಾಯ 12:4–6ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.