Isaiah · chapter 65 · verse 23
Isaiah 65:23 in Kannada
ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
Avaru vyarthavaagi dudiyaru kashtavannu edurugolluvadilla; yaakandare avaru kartanu aasheervadisidavara santaanavaagiddaare. Avara sangada avara santatiyu saha aasheervadisa lpaduvadu.
Isaiah 65:23 in English
- King James Version (KJV)
- They shall not labour in vain, nor bring forth for trouble; for they [are] the seed of the blessed of the LORD, and their offspring with them.
- World English Bible (WEB)
- They will not labor in vain nor give birth for calamity; for they are the offspring of the LORD’s blessed and their descendants with them.
- American Standard Version (ASV)
- They shall not labor in vain, nor bring forth for calamity; for they are the seed of the blessed of Jehovah, and their offspring with them.
- Bible in Basic English (BBE)
- Their work will not be for nothing, and they will not give birth to children for destruction; for they are a seed to whom the Lord has given his blessing, and their offspring will be with them.
- Darby Translation (DBY)
- They shall not labour in vain, nor bring forth for terror; for they are the seed of the blessed of Jehovah, and their offspring with them.
- Webster's Bible (WBS)
- They shall not labor in vain, nor bring forth for trouble; for they [are] the seed of the blessed of the LORD, and their offspring with them.
- Young's Literal Translation (YLT)
- They labour not for a vain thing, Nor do they bring forth for trouble, For the seed of the blessed of Jehovah [are] they, And their offspring with them.
Read in context
- 21ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
- 22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- 23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
- 24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Cross references
- Isaiah 61:9 ಯೆಶಾಯ 61:9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- Jeremiah 32:38–39 ಯೆರೆಮೀಯ 32:38–39ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Deuteronomy 28:3–12 ಧರ್ಮೋಪದೇಶಕಾಂಡ 28:3–12ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Psalm 115:14–15 ಕೀರ್ತನೆಗಳು 115:14–15ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು. ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Isaiah 49:4 ಯೆಶಾಯ 49:4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- Romans 9:7–8 ರೋಮಾಪುರದವರಿಗೆ 9:7–8ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Zechariah 10:8–9 ಜೆಕರ್ಯ 10:8–9ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Leviticus 26:3–10 ಯಾಜಕಕಾಂಡ 26:3–10ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ. ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.