Isaiah · chapter 65 · verse 5
Isaiah 65:5 in Kannada
ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
Ninna shtakke neene nintuko, nanna balige barabeda, yaakandare ninaginta naanu parishuddhanaagidde nendu heluvavaru; ivaru nanna mooginalli hogeyaagiyoo hagalellaa uriyuva benki yaagiyoo iddaare.
Isaiah 65:5 in English
- King James Version (KJV)
- Which say, Stand by thyself, come not near to me; for I am holier than thou. These [are] a smoke in my nose, a fire that burneth all the day.
- World English Bible (WEB)
- who say, ‘Stay by yourself, don’t come near to me, for I am holier than you.’ These are smoke in my nose, a fire that burns all day.
- American Standard Version (ASV)
- that say, Stand by thyself, come not near to me, for I am holier than thou. These are a smoke in my nose, a fire that burneth all the day.
- Bible in Basic English (BBE)
- Who say, Keep away, do not come near me, for fear that I make you holy: these are a smoke in my nose, a fire burning all day.
- Darby Translation (DBY)
- who say, Stand by thyself, come not near to me; for I am holier than thou. These are a smoke in my nose, a fire that burneth all the day.
- Webster's Bible (WBS)
- Which say, Stand by thyself, come not near to me; for I am holier than thou. These [are] a smoke in my nose, a fire that burneth all the day.
- Young's Literal Translation (YLT)
- Who are saying, 'Keep to thyself, come not nigh to me, For I have declared thee unholy.' These [are] a smoke in Mine anger, A fire burning all the day.
Read in context
- 3ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
- 4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- 5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- 6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- 7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
Cross references
- Luke 18:9–12 ಲೂಕನು 18:9–12ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Romans 2:17–29 ರೋಮಾಪುರದವರಿಗೆ 2:17–29ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ. ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ. ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ? ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ? ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Luke 15:28–30 ಲೂಕನು 15:28–30ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Acts 22:21–22 ಅಪೊಸ್ತಲರ ಕೃತ್ಯಗಳು 22:21–22ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Proverbs 6:16–17 ಜ್ಞಾನೋಕ್ತಿಗಳು 6:16–17ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Proverbs 10:26 ಜ್ಞಾನೋಕ್ತಿಗಳು 10:26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
- Matthew 9:11 ಮತ್ತಾಯನು 9:11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.