Isaiah · chapter 65 · verse 8
Isaiah 65:8 in Kannada
ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
Kartanu heluvadenandare--draakshegone yalli hosadraakshaarasa kandukolluvadannu obbanu nodi--kedisabeda, adaralli aasheervaada untendu heluvadu hego haageye nanna sevakarigoskara avarannellaa naanu kedisi bidada haage maaduvenu.
Isaiah 65:8 in English
- King James Version (KJV)
- Thus saith the LORD, As the new wine is found in the cluster, and [one] saith, Destroy it not; for a blessing [is] in it: so will I do for my servants’ sakes, that I may not destroy them all.
- World English Bible (WEB)
- The LORD says, “As the new wine is found in the cluster, and one says, ‘Don’t destroy it, for a blessing is in it:’ so I will do for my servants’ sake, that I may not destroy them all.
- American Standard Version (ASV)
- Thus saith Jehovah, As the new wine is found in the cluster, and one saith, Destroy it not, for a blessing is in it: so will I do for my servants’ sake, that I may not destroy them all.
- Bible in Basic English (BBE)
- This is the word of the Lord: As the new wine is seen in the grapes, and they say, Do not send destruction on it, for a blessing is in it: so will I do for my servants, in order that I may not put an end to them all.
- Darby Translation (DBY)
- Thus saith Jehovah: As the new wine is found in the cluster, and it is said, Destroy it not, for a blessing is in it; so will I do for my servants' sakes, that I may not destroy [them] all.
- Webster's Bible (WBS)
- Thus saith the LORD, As the new wine is found in the cluster, and [one] saith, Destroy it not; for a blessing [is] in it: so will I do for my servants' sake, that I may not destroy them all.
- Young's Literal Translation (YLT)
- Thus said Jehovah: As the new wine is found in the cluster, And one hath said, 'Destroy it not for a blessing [is] in it,' So I do for My servants' sake, not to destroy the whole.
Read in context
- 6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- 7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
- 8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- 9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- 10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
Cross references
- Romans 9:27–29 ರೋಮಾಪುರದವರಿಗೆ 9:27–29ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ. ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು. ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
- Amos 9:8–9 ಆಮೋಸ 9:8–9ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Romans 11:24–26 ರೋಮಾಪುರದವರಿಗೆ 11:24–26ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ. ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- Romans 11:5–6 ರೋಮಾಪುರದವರಿಗೆ 11:5–6ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Mark 13:20 ಮಾರ್ಕನು 13:20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?