Isaiah · chapter 65 · verse 9
Isaiah 65:9 in Kannada
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
Yaakobinolaginda ondu santaanavannoo yehoodadolaginda nanna parvatagalige baadhyasthanaagiruvavanannoo horage baramaaduvenu; naanu aadukondavaru adannu svaadheenamaadikolluvaru; nanna sevakaru adaralivaasavaaguvaru.
Isaiah 65:9 in English
- King James Version (KJV)
- And I will bring forth a seed out of Jacob, and out of Judah an inheritor of my mountains: and mine elect shall inherit it, and my servants shall dwell there.
- World English Bible (WEB)
- I will bring offspring out of Jacob, and out of Judah an inheritor of my mountains. My chosen will inherit it, and my servants will dwell there.
- American Standard Version (ASV)
- And I will bring forth a seed out of Jacob, and out of Judah an inheritor of my mountains; and my chosen shall inherit it, and my servants shall dwell there.
- Bible in Basic English (BBE)
- And I will take a seed out of Jacob, and out of Judah one who will have my mountains for a heritage: and the people I have taken to be mine will have it for themselves, and my servants will have their resting-place there.
- Darby Translation (DBY)
- And I will bring forth a seed out of Jacob, and out of Judah a possessor of my mountains; and mine elect shall possess it, and my servants shall dwell there.
- Webster's Bible (WBS)
- And I will bring forth a seed out of Jacob, and out of Judah an inheritor of my mountains: and my elect shall inherit it, and my servants shall dwell there.
- Young's Literal Translation (YLT)
- And I have brought out from Jacob a seed, And from Judah a possessor of My mount, And possess it do My chosen ones, And My servants do dwell there.
Read in context
- 7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
- 8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- 9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- 10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- 11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
Cross references
- Amos 9:11–15 ಆಮೋಸ 9:11–15ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- Romans 11:5–7 ರೋಮಾಪುರದವರಿಗೆ 11:5–7ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Jeremiah 33:17–26 ಯೆರೆಮೀಯ 33:17–26ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ-- ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Isaiah 32:18 ಯೆಶಾಯ 32:18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- Isaiah 65:22 ಯೆಶಾಯ 65:22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Jeremiah 31:36–40 ಯೆರೆಮೀಯ 31:36–40ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ. ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ. ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Ezekiel 37:21–28 ಯೆಹೆಜ್ಕೇಲನು 37:21–28ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು. ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Isaiah 11:11–16 ಯೆಶಾಯ 11:11–16ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Romans 11:28 ರೋಮಾಪುರದವರಿಗೆ 11:28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
- Obadiah 1:17–21 ಓಬದ್ಯ 1:17–21ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು. ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ. ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು. ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು. ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.