Isaiah · chapter 66 · verse 16
Isaiah 66:16 in Kannada
ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
Benki yindaloo tanna kattiyindaloo kartanu manushya rigellaa nyaayateerisuvanu; kartaninda kollalpatta varu anekaraagiruvaru.
Isaiah 66:16 in English
- King James Version (KJV)
- For by fire and by his sword will the LORD plead with all flesh: and the slain of the LORD shall be many.
- World English Bible (WEB)
- For the LORD will execute judgment by fire and by his sword on all flesh; and those slain by the LORD will be many.
- American Standard Version (ASV)
- For by fire will Jehovah execute judgment, and by his sword, upon all flesh; and the slain of Jehovah shall be many.
- Bible in Basic English (BBE)
- For with fire and sword will the Lord come, judging all the earth, and his sword will be on all flesh: and great numbers will be put to death by him.
- Darby Translation (DBY)
- For by fire and by his sword will Jehovah enter into judgment with all flesh: and the slain of Jehovah shall be many.
- Webster's Bible (WBS)
- For by fire and by his sword will the LORD plead with all flesh: and the slain of the LORD shall be many.
- Young's Literal Translation (YLT)
- For by fire and by His sword, Doth Jehovah do judgment with all flesh. And many have been Jehovah's pierced ones.'
Read in context
- 14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- 15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
- 16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- 17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- 18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
Cross references
- Ezekiel 38:21–22 ಯೆಹೆಜ್ಕೇಲನು 38:21–22ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Ezekiel 39:2–10 ಯೆಹೆಜ್ಕೇಲನು 39:2–10ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು; ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು. ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು. ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು. ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು. ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ; ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು. ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Revelation 19:11–21 ಪ್ರಕಟನೆ 19:11–21ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Isaiah 34:5–10 ಯೆಶಾಯ 34:5–10ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.