Isaiah · chapter 66 · verse 20
Isaiah 66:20 in Kannada
ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
Avaru nimma sahodararannu kuduregala meleyoo ratha galalliyoo paalkigalalliyoo hesara kattegala meleyoo vegavaagi hoguva praanigala meleyoo samasta janaangagalolaginda karta nige kaanikeyaagi israayelina makkalu kaanike yannu shuddha paatreyalli kartana manege taruva prakaara nanna parishuddha parvatavaada yeroosa lemige taruvarendu kartanu heluttaane.
Isaiah 66:20 in English
- King James Version (KJV)
- And they shall bring all your brethren [for] an offering unto the LORD out of all nations upon horses, and in chariots, and in litters, and upon mules, and upon swift beasts, to my holy mountain Jerusalem, saith the LORD, as the children of Israel bring an offering in a clean vessel into the house of the LORD.
- World English Bible (WEB)
- They shall bring all your brothers out of all the nations for an offering to the LORD, on horses, in chariots, in litters, on mules, and on camels, to my holy mountain Jerusalem, says the LORD, as the children of Israel bring their offering in a clean vessel into the LORD’s house.
- American Standard Version (ASV)
- And they shall bring all your brethren out of all the nations for an oblation unto Jehovah, upon horses, and in chariots, and in litters, and upon mules, and upon dromedaries, to my holy mountain Jerusalem, saith Jehovah, as the children of Israel bring their oblation in a clean vessel into the house of Jehovah.
- Bible in Basic English (BBE)
- And they will take your countrymen out of all the nations for an offering to the Lord, on horses, and in carriages, and in carts, and on asses, and on camels, to my holy mountain Jerusalem, says the Lord, as the children of Israel take their offering in a clean vessel into the house of the Lord.
- Darby Translation (DBY)
- And they shall bring all your brethren out of all the nations as an oblation unto Jehovah, upon horses, and in chariots, and in covered waggons, and upon mules, and upon dromedaries, to my holy mountain, to Jerusalem, saith Jehovah, as the children of Israel bring an oblation in a clean vessel into the house of Jehovah.
- Webster's Bible (WBS)
- And they shall bring all your brethren [for] an offering to the LORD out of all nations upon horses, and in chariots, and in litters, and upon mules, and upon swift beasts, to my holy mountain Jerusalem, saith the LORD, as the children of Israel bring an offering in a clean vessel into the house of the LORD.
- Young's Literal Translation (YLT)
- And they have brought all your brethren out of all the nations, A present to Jehovah, On horses, and on chariot, and on litters, And on mules, and on dromedaries, Unto My holy mountain Jerusalem, said Jehovah, As the sons of Israel bring the present in a clean vessel, Into the house of Jehovah.
Read in context
- 18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
- 19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- 20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- 21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
- 22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Cross references
- Isaiah 60:3–14 ಯೆಶಾಯ 60:3–14ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 65:11 ಯೆಶಾಯ 65:11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Isaiah 49:12–26 ಯೆಶಾಯ 49:12–26ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ. ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು. ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು. ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು. ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು. ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Isaiah 54:3 ಯೆಶಾಯ 54:3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
Original words (Hebrew)
- bring · H935בּוֹא bôwʼ
- brethren · H251אָח ʼâch
- offering · H4503מִנְחָה minchâh
- nations · H1471גּוֹי gôwy
- horses · H5483סוּס çûwç
- chariots · H7393רֶכֶב rekeb
- litters · H6632צָב tsâb
- mules · H6505פֶּרֶד pered
- beasts · H3753כַּרְכָּרָה karkârâh
- holy · H6944קֹדֶשׁ qôdesh
- mountain · H2022הַר har
- Jerusalem · H3389יְרוּשָׁלַ͏ִם Yᵉrûwshâlaim
- saith · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- bring · H935בּוֹא bôwʼ
- offering · H4503מִנְחָה minchâh
- clean · H2889טָהוֹר ṭâhôwr
- vessel · H3627כְּלִי kᵉlîy
- house · H1004בַּיִת bayith