Isaiah · chapter 7 · verse 11
Isaiah 7:11 in Kannada
ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
Ninna devaraada kartaninda ondu gurutannu kelu; adu kelage aaladallaadaroo illave mele ettarada lliddaroo adannu keliko endu helidanu.
Isaiah 7:11 in English
- King James Version (KJV)
- Ask thee a sign of the LORD thy God; ask it either in the depth, or in the height above.
- World English Bible (WEB)
- “Ask a sign of the LORD your God; ask it either in the depth, or in the height above.”
- American Standard Version (ASV)
- Ask thee a sign of Jehovah thy God; ask it either in the depth, or in the height above.
- Bible in Basic English (BBE)
- Make a request to the Lord your God for a sign, a sign in the deep places of the underworld, or in the high heavens.
- Darby Translation (DBY)
- Ask for thee a sign from Jehovah thy God; ask for it in the deep, or in the height above.
- Webster's Bible (WBS)
- Ask thee a sign from the LORD thy God; ask it either in the depth, or in the hight above.
- Young's Literal Translation (YLT)
- 'Ask for thee a sign from Jehovah thy God, Make deep the request, or make [it] high upwards.'
Read in context
- 9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 10ಇದಲ್ಲದೆ ಕರ್ತನು ಆಹಾಜನಿಗೆ --
- 11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
- 12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- 13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
Cross references
- Isaiah 37:30 ಯೆಶಾಯ 37:30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
- Isaiah 38:7–8 ಯೆಶಾಯ 38:7–8ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ. ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- 2 Kings 19:29 2 ಅರಸುಗಳು 19:29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
- Isaiah 38:22 ಯೆಶಾಯ 38:22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Judges 6:36–40 ನ್ಯಾಯಸ್ಥಾಪಕರು 6:36–40ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು. ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು. ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು. ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
- 2 Kings 20:8–11 2 ಅರಸುಗಳು 20:8–11ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
- Matthew 12:38–40 ಮತ್ತಾಯನು 12:38–40ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Jeremiah 19:10 ಯೆರೆಮೀಯ 19:10ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
- Jeremiah 51:63–64 ಯೆರೆಮೀಯ 51:63–64ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Jeremiah 19:1 ಯೆರೆಮೀಯ 19:1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
- Matthew 16:1–4 ಮತ್ತಾಯನು 16:1–4ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.