Isaiah · chapter 7 · verse 14
Isaiah 7:14 in Kannada
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
Aadakaarana kartanu taane ondu gurutannu ninage kodu vanu; igo, obba kannikeyu garbhiniyaagi obba maganannu hadeyuvalu. Aatanannu immaanu vel endu kareyuvaru.
Isaiah 7:14 in English
- King James Version (KJV)
- Therefore the Lord himself shall give you a sign; Behold, a virgin shall conceive, and bear a son, and shall call his name Immanuel.
- World English Bible (WEB)
- Therefore the Lord himself will give you a sign. Behold, the virgin will conceive, and bear a son, and shall call his name Immanuel.
- American Standard Version (ASV)
- Therefore the Lord himself will give you a sign: behold, a virgin shall conceive, and bear a son, and shall call his name Immanuel.
- Bible in Basic English (BBE)
- For this cause the Lord himself will give you a sign; a young woman is now with child, and she will give birth to a son, and she will give him the name Immanuel.
- Darby Translation (DBY)
- Therefore will the Lord himself give you a sign: Behold, the virgin shall conceive and shall bring forth a son, and call his name Immanuel.
- Webster's Bible (WBS)
- Therefore the LORD himself will give you a sign; Behold, a virgin shall conceive, and bear a son, and shall call his name Immanuel.
- Young's Literal Translation (YLT)
- Therefore the Lord Himself giveth to you a sign, Lo, the Virgin is conceiving, And is bringing forth a son, And hath called his name Immanuel,
Read in context
- 12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- 13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- 14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- 15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- 16ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
Cross references
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Luke 1:31 ಲೂಕನು 1:31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
- John 1:1–2 ಯೋಹಾನನು 1:1–2ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Isaiah 8:8 ಯೆಶಾಯ 8:8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Isaiah 8:10 ಯೆಶಾಯ 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- Jeremiah 31:22 ಯೆರೆಮೀಯ 31:22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.