Isaiah · chapter 7 · verse 16
Isaiah 7:16 in Kannada
ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
Aa maguvu kettaddannu niraakarisi olleyadannu aarisikolluvadakkinta muncheye neenu hesikolluva deshavannu avala ibbaru arasaru tyajisibiduvaru.
Isaiah 7:16 in English
- King James Version (KJV)
- For before the child shall know to refuse the evil, and choose the good, the land that thou abhorrest shall be forsaken of both her kings.
- World English Bible (WEB)
- For before the child knows to refuse the evil and choose the good, the land whose two kings you abhor shall be forsaken.
- American Standard Version (ASV)
- For before the child shall know to refuse the evil, and choose the good, the land whose two kings thou abhorrest shall be forsaken.
- Bible in Basic English (BBE)
- For before the child is old enough to make a decision between evil and good, the land whose two kings you are now fearing will have become waste.
- Darby Translation (DBY)
- For before the child knoweth to refuse the evil and to choose the good, the land whose two kings thou fearest shall be forsaken.
- Webster's Bible (WBS)
- For before the child shall know to refuse the evil, and choose the good, the land that thou abhorrest shall be forsaken by both her kings.
- Young's Literal Translation (YLT)
- For before the youth doth know To refuse evil, and to fix on good, Forsaken is the land thou art vexed with, because of her two kings.
Read in context
- 14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- 15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- 16ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
- 17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- 18ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
Cross references
- Isaiah 8:4 ಯೆಶಾಯ 8:4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- Deuteronomy 1:39 ಧರ್ಮೋಪದೇಶಕಾಂಡ 1:39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- Isaiah 9:11 ಯೆಶಾಯ 9:11ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
- Amos 1:3–5 ಆಮೋಸ 1:3–5ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು. ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು. ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
- Jonah 4:11 ಯೋನ 4:11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
- Hosea 5:9 ಹೋಶೇಯ 5:9ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
- 2 Kings 15:29–30 2 ಅರಸುಗಳು 15:29–30ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು. ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- Isaiah 17:1–3 ಯೆಶಾಯ 17:1–3ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು. ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು. ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.