Isaiah · chapter 8 · verse 12
Isaiah 8:12 in Kannada
ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
Ivaru yaavadannu oppanda endu heluttaaro neevu adannu oppandavennabediri; avara bhayakke neevu bhayapadabediri, illave hedarabediri.
Isaiah 8:12 in English
- King James Version (KJV)
- Say ye not, A confederacy, to all [them to] whom this people shall say, A confederacy; neither fear ye their fear, nor be afraid.
- World English Bible (WEB)
- “Don’t call a conspiracy all that this people call a conspiracy. Don’t fear their threats or be terrorized.
- American Standard Version (ASV)
- Say ye not, A conspiracy, concerning all whereof this people shall say, A conspiracy; neither fear ye their fear, nor be in dread [thereof].
- Bible in Basic English (BBE)
- Do not say, It is holy, about everything of which this people says, It is holy; and do not be in fear of what they go in fear of.
- Darby Translation (DBY)
- Ye shall not say, Conspiracy, of everything of which this people saith, Conspiracy; and fear ye not their fear, and be not in dread.
- Webster's Bible (WBS)
- Say ye not, A confederacy, to all [them to] whom this people shall say, A confederacy; neither fear ye their fear, nor be afraid.
- Young's Literal Translation (YLT)
- 'Ye do not say, A confederacy, To all to whom this people saith, A confederacy, And its fear ye do not fear, Nor declare fearful.
Read in context
- 10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 11ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
- 12ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
- 13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- 14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
Cross references
- 1 Peter 3:14–15 1 ಪೇತ್ರನು 3:14–15ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ. ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- Luke 21:9 ಲೂಕನು 21:9ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Psalm 53:5 ಕೀರ್ತನೆಗಳು 53:5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Isaiah 30:1 ಯೆಶಾಯ 30:1ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
- 2 Kings 16:5–7 2 ಅರಸುಗಳು 16:5–7ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು. ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ. ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
- Isaiah 57:9–11 ಯೆಶಾಯ 57:9–11ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ. ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ. ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- Isaiah 7:2–6 ಯೆಶಾಯ 7:2–6ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
- Matthew 28:2–5 ಮತ್ತಾಯನು 28:2–5ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.