Isaiah · chapter 8 · verse 13
Isaiah 8:13 in Kannada
ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
Sainyagala kartananne pratishthepadisi kolliri; aatane nimma bhayavoo bhayankaranoo aagirali.
Isaiah 8:13 in English
- King James Version (KJV)
- Sanctify the LORD of hosts himself; and [let] him [be] your fear, and [let] him [be] your dread.
- World English Bible (WEB)
- The LORD of Armies is who you must respect as holy. He is the one you must fear. He is the one you must dread.
- American Standard Version (ASV)
- Jehovah of hosts, him shall ye sanctify; and let him be your fear, and let him be your dread.
- Bible in Basic English (BBE)
- But let the Lord of armies be holy to you, and go in fear of him, giving honour to him.
- Darby Translation (DBY)
- Jehovah of hosts, him shall ye sanctify; and let him be your fear, and let him be your dread.
- Webster's Bible (WBS)
- Sanctify the LORD of hosts himself; and [let] him [be] your fear, and [let] him [be] your dread.
- Young's Literal Translation (YLT)
- Jehovah of Hosts — Him ye do sanctify, And He [is] your Fear, and He your Dread,
Read in context
- 11ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
- 12ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
- 13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- 14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- 15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
Cross references
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Malachi 2:5 ಮಲಾಕಿಯ 2:5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
- Numbers 20:12–13 ಅರಣ್ಯಕಾಂಡ 20:12–13ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು. ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Isaiah 29:23 ಯೆಶಾಯ 29:23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- Numbers 27:14 ಅರಣ್ಯಕಾಂಡ 27:14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- Romans 4:20 ರೋಮಾಪುರದವರಿಗೆ 4:20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.