Isaiah · chapter 8 · verse 6
Isaiah 8:6 in Kannada
ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
Ee janaru mellage hariyuva silovada neerannu tyajisi recheeninalliyoo remalyana maganalliyoo merediddarinda
Isaiah 8:6 in English
- King James Version (KJV)
- Forasmuch as this people refuseth the waters of Shiloah that go softly, and rejoice in Rezin and Remaliah’s son;
- World English Bible (WEB)
- “Because this people has refused the waters of Shiloah that go softly, and rejoice in Rezin and Remaliah’s son;
- American Standard Version (ASV)
- Forasmuch as this people have refused the waters of Shiloah that go softly, and rejoice in Rezin and Remaliah’s son;
- Bible in Basic English (BBE)
- Because this people will have nothing to do with the softly-flowing waters of Shiloah, and have fear of Rezin and Remaliah's son;
- Darby Translation (DBY)
- Forasmuch as this people refuseth the waters of Shiloah which flow softly, and rejoiceth in Rezin and in the son of Remaliah,
- Webster's Bible (WBS)
- Forasmuch as this people refuseth the waters of Shiloah that flow gently, and rejoice in Rezin and Remaliah's son;
- Young's Literal Translation (YLT)
- 'Because that this people hath refused The waters of Shiloah that go softly, And is rejoicing with Rezin and the son of Remaliah,
Read in context
- 4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- 5ಕರ್ತನು ಮತ್ತೊಂದಾವರ್ತಿ ನನಗೆ--
- 6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- 7ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
- 8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
Cross references
- John 9:7 ಯೋಹಾನನು 9:7ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- Nehemiah 3:15 ನೆಹೆಮೀಯ 3:15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
- Jeremiah 18:14 ಯೆರೆಮೀಯ 18:14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Jeremiah 2:18 ಯೆರೆಮೀಯ 2:18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Isaiah 7:6 ಯೆಶಾಯ 7:6ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
- Isaiah 7:1–2 ಯೆಶಾಯ 7:1–2ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- 1 Kings 7:16 1 ಅರಸುಗಳು 7:16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
- 2 Chronicles 13:8–18 2 ಪೂರ್ವಕಾಲವೃತ್ತಾಂತ 13:8–18ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು. ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು. ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ. ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು. ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು. ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು. ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು. ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು. ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು. ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
- Judges 9:16–20 ನ್ಯಾಯಸ್ಥಾಪಕರು 9:16–20ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು, ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ. ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.