Isaiah · chapter 9 · verse 13
Isaiah 9:13 in Kannada
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
Heegiddaagyoo aa janaru tammannu hode daatana kadege tirugadeyoo illave sainyagala kartanannu hudukadeyoo iddaare.
Isaiah 9:13 in English
- King James Version (KJV)
- For the people turneth not unto him that smiteth them, neither do they seek the LORD of hosts.
- World English Bible (WEB)
- Yet the people have not turned to him who struck them, neither have they sought the LORD of Armies.
- American Standard Version (ASV)
- Yet the people have not turned unto him that smote them, neither have they sought Jehovah of hosts.
- Bible in Basic English (BBE)
- But the heart of the people was not turned to him who sent punishment on them, and they made no prayer to the Lord of armies.
- Darby Translation (DBY)
- But the people turneth not unto him that smiteth them, and they do not seek Jehovah of hosts.
- Webster's Bible (WBS)
- For the people turn not to him that smiteth them, neither do they seek the LORD of hosts.
- Young's Literal Translation (YLT)
- And the people hath not turned back unto Him who is smiting it, And Jehovah of Hosts they have not sought.
Read in context
- 11ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
- 12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- 13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- 14ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
- 15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
Cross references
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Hosea 7:10 ಹೋಶೇಯ 7:10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Isaiah 57:17 ಯೆಶಾಯ 57:17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Hosea 3:4–5 ಹೋಶೇಯ 3:4–5ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Hosea 7:16 ಹೋಶೇಯ 7:16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- Deuteronomy 4:29 ಧರ್ಮೋಪದೇಶಕಾಂಡ 4:29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- Jeremiah 29:11 ಯೆರೆಮೀಯ 29:11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.