Isaiah · chapter 9 · verse 15
Isaiah 9:15 in Kannada
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
Hiriyanu mattu ghanavullavanu taleyaagiruvanu; sullubodhisuva pravaa diyu baalavaagiruvanu.
Isaiah 9:15 in English
- King James Version (KJV)
- The ancient and honourable, he [is] the head; and the prophet that teacheth lies, he [is] the tail.
- World English Bible (WEB)
- The elder and the honorable man is the head, and the prophet who teaches lies is the tail.
- American Standard Version (ASV)
- The elder and the honorable man, he is the head; and the prophet that teacheth lies, he is the tail.
- Bible in Basic English (BBE)
- The man who is honoured and responsible is the head, and the prophet who gives false teaching is the tail.
- Darby Translation (DBY)
- the ancient and honourable, he is the head; and the prophet that teacheth lies, he is the tail.
- Webster's Bible (WBS)
- The ancient and honorable, he [is] the head; and the prophet that teacheth lies, he [is] the tail.
- Young's Literal Translation (YLT)
- Elder, and accepted of face, he [is] the head, Prophet, teacher of falsehood, he [is] the tail.
Read in context
- 13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- 14ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
- 15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- 16ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- 17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
Cross references
- Isaiah 29:10 ಯೆಶಾಯ 29:10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
- 2 Timothy 4:2–3 2 ತಿಮೊಥೆಯನಿಗೆ 4:2–3ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 1 Samuel 9:6 1 ಸಮುವೇಲನು 9:6ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
- Isaiah 3:2–3 ಯೆಶಾಯ 3:2–3ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- Jeremiah 29:21–22 ಯೆರೆಮೀಯ 29:21–22ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು. ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- Jeremiah 14:14–15 ಯೆರೆಮೀಯ 14:14–15ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Jeremiah 27:14–15 ಯೆರೆಮೀಯ 27:14–15ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.