Isaiah · chapter 9 · verse 8
Isaiah 9:8 in Kannada
ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
Kartanu yaakobanige ondu maatannu heli kaluhisidanu; adu israayelyara mele holeyitu.
Isaiah 9:8 in English
- King James Version (KJV)
- The Lord sent a word into Jacob, and it hath lighted upon Israel.
- World English Bible (WEB)
- The Lord sent a word into Jacob, and it falls on Israel.
- American Standard Version (ASV)
- The Lord sent a word into Jacob, and it hath lighted upon Israel.
- Bible in Basic English (BBE)
- The Lord has sent a word to Jacob, and it has come on Israel;
- Darby Translation (DBY)
- The Lord sent a word unto Jacob, and it lighteth upon Israel.
- Webster's Bible (WBS)
- The LORD sent a word into Jacob, and it hath lighted upon Israel.
- Young's Literal Translation (YLT)
- A word hath the Lord sent into Jacob, And it hath fallen in Israel.
Read in context
- 6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- 7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 8ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
- 9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
- 10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
Cross references
- Isaiah 7:7–8 ಯೆಶಾಯ 7:7–8ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- Micah 1:1–9 ಮೀಕ 1:1–9ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು. ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ. ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು. ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು. ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ? ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು. ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು. ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು. ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Isaiah 8:4–8 ಯೆಶಾಯ 8:4–8ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು. ಕರ್ತನು ಮತ್ತೊಂದಾವರ್ತಿ ನನಗೆ-- ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Zechariah 5:1–4 ಜೆಕರ್ಯ 5:1–4ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ. ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು. ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.