James · chapter 1 · verse 10
James 1:10 in Kannada
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
Aishvarya vantanaada sahodaranu taanu deenasthitige bande nendu ullaasapadali. Aadare aishvaryavantanu hullina hoovinante gatisi hoguvanu.
James 1:10 in English
- King James Version (KJV)
- But the rich, in that he is made low: because as the flower of the grass he shall pass away.
- World English Bible (WEB)
- and the rich, in that he is made humble, because like the flower in the grass, he will pass away.
- American Standard Version (ASV)
- and the rich, in that he is made low: because as the flower of the grass he shall pass away.
- Bible in Basic English (BBE)
- But the man of wealth, that he is made low; because like the flower of the grass he will come to his end.
- Darby Translation (DBY)
- and the rich in his humiliation, because as [the] grass's flower he will pass away.
- Webster's Bible (WBS)
- But the rich, in that he is made low: because as the flower of the grass he shall pass away.
- Young's Literal Translation (YLT)
- and the rich in his becoming low, because as a flower of grass he shall pass away;
Read in context
- 8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- 9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
- 10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
- 11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
Cross references
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Matthew 5:3 ಮತ್ತಾಯನು 5:3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- Psalm 103:15 ಕೀರ್ತನೆಗಳು 103:15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Matthew 6:30 ಮತ್ತಾಯನು 6:30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
- Isaiah 40:6 ಯೆಶಾಯ 40:6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
- Psalm 90:5–6 ಕೀರ್ತನೆಗಳು 90:5–6ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
- 1 Corinthians 7:31 1 ಕೊರಿಂಥದವರಿಗೆ 7:31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
- Psalm 37:2 ಕೀರ್ತನೆಗಳು 37:2ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.