James · chapter 1 · verse 11
James 1:11 in Kannada
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
Sooryanu udayisida takshanave ushnate yinda hullannu baadisalu aa hullina hoovu uduri adara roopada sogasu naashavaagu vadashte. Heegeye aishvaryavantanu tanna daari galalli baadi hoguvanu.
James 1:11 in English
- King James Version (KJV)
- For the sun is no sooner risen with a burning heat, but it withereth the grass, and the flower thereof falleth, and the grace of the fashion of it perisheth: so also shall the rich man fade away in his ways.
- World English Bible (WEB)
- For the sun arises with the scorching wind and withers the grass; and the flower in it falls, and the beauty of its appearance perishes. So the rich man will also fade away in his pursuits.
- American Standard Version (ASV)
- For the sun ariseth with the scorching wind, and withereth the grass; and the flower thereof falleth, and the grace of the fashion of it perisheth: so also shall the rich man fade away in his goings.
- Bible in Basic English (BBE)
- For when the sun comes up with its burning heat, the grass gets dry and the grace of its form is gone with the falling flower; so the man of wealth comes to nothing in his ways.
- Darby Translation (DBY)
- For the sun has risen with its burning heat, and has withered the grass, and its flower has fallen, and the comeliness of its look has perished: thus the rich also shall wither in his goings.
- Webster's Bible (WBS)
- For the sun hath no sooner risen with a burning heat, but it withereth the grass, and its flower falleth, and the grace of the fashion of it perisheth: so also shall the rich man fade away in his ways.
- Young's Literal Translation (YLT)
- for the sun did rise with the burning heat, and did wither the grass, and the flower of it fell, and the grace of its appearance did perish, so also the rich in his way shall fade away!
Read in context
- 9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
- 10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
- 11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- 13ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
Cross references
- Isaiah 40:7–8 ಯೆಶಾಯ 40:7–8ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Luke 16:19–25 ಲೂಕನು 16:19–25ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Mark 4:6 ಮಾರ್ಕನು 4:6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
- Psalm 49:6–14 ಕೀರ್ತನೆಗಳು 49:6–14ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ. ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- James 5:1–7 ಯಾಕೋಬನು 5:1–7ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ. ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- Matthew 13:6 ಮತ್ತಾಯನು 13:6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- Luke 12:16–21 ಲೂಕನು 12:16–21ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- 1 Corinthians 7:31 1 ಕೊರಿಂಥದವರಿಗೆ 7:31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
- Job 21:24–30 ಯೋಬನು 21:24–30ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ. ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ. ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ? ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ? ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Psalm 102:4 ಕೀರ್ತನೆಗಳು 102:4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
Original words (Greek)
- For · G1063γάρ gár
- sun · G2246ἥλιος hḗlios
- risen · G393ἀνατέλλω anatéllō
- with · G4862σύν sýn
- heat · G2742καύσων kaúsōn
- but · G2532καί kaí
- withereth · G3583ξηραίνω xēraínō
- grass · G5528χόρτος chórtos
- and · G2532καί kaí
- flower · G438ἄνθος ánthos
- thereof · G846αὐτός autós
- falleth · G1601ἐκπίπτω ekpíptō
- and · G2532καί kaí
- grace · G2143εὐπρέπεια euprépeia
- fashion · G4383πρόσωπον prósōpon
- it · G846αὐτός autós
- perisheth · G622ἀπόλλυμι apóllymi
- so · G3779οὕτω hoútō
- also · G2532καί kaí
- shall · G3133μαραίνω maraínō
- man · G4145πλούσιος ploúsios
- away · G3133μαραίνω maraínō
- in · G1722ἐν en
- his · G846αὐτός autós
- ways · G4197πορεία poreía