James · chapter 1 · verse 14
James 1:14 in Kannada
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
Aadare pratiyobbanu tanna svanta duraasheyinda eleyalpattu marulugondavanaagi shodhisalpaduttaane.
James 1:14 in English
- King James Version (KJV)
- But every man is tempted, when he is drawn away of his own lust, and enticed.
- World English Bible (WEB)
- But each one is tempted when he is drawn away by his own lust and enticed.
- American Standard Version (ASV)
- but each man is tempted, when he is drawn away by his own lust, and enticed.
- Bible in Basic English (BBE)
- But every man is tested when he is turned out of the right way by the attraction of his desire.
- Darby Translation (DBY)
- But every one is tempted, drawn away, and enticed by his own lust;
- Webster's Bible (WBS)
- But every man is tempted, when he is drawn away by his own lust, and enticed.
- Young's Literal Translation (YLT)
- and each one is tempted, by his own desires being led away and enticed,
Read in context
- 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- 13ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
- 14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- 15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- 16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
Cross references
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- Matthew 15:18 ಮತ್ತಾಯನು 15:18ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Romans 7:13 ರೋಮಾಪುರದವರಿಗೆ 7:13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- James 4:1–2 ಯಾಕೋಬನು 4:1–2ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Genesis 6:5 ಆದಿಕಾಂಡ 6:5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Romans 7:11 ರೋಮಾಪುರದವರಿಗೆ 7:11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- Job 31:27 ಯೋಬನು 31:27ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;