James · chapter 1 · verse 15
James 1:15 in Kannada
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
Aamele duraasheyu garbhadharisi paapavannu heruttade; paapavu sampoornavaada mele marana vannu hadeyuttade.
James 1:15 in English
- King James Version (KJV)
- Then when lust hath conceived, it bringeth forth sin: and sin, when it is finished, bringeth forth death.
- World English Bible (WEB)
- Then the lust, when it has conceived, bears sin. The sin, when it is full grown, produces death.
- American Standard Version (ASV)
- Then the lust, when it hath conceived, beareth sin: and the sin, when it is fullgrown, bringeth forth death.
- Bible in Basic English (BBE)
- Then when its time comes, desire gives birth to sin; and sin, when it is of full growth, gives birth to death.
- Darby Translation (DBY)
- then lust, having conceived, gives birth to sin; but sin fully completed brings forth death.
- Webster's Bible (WBS)
- Then when lust hath conceived, it bringeth forth sin: and sin, when it is finished, bringeth forth death.
- Young's Literal Translation (YLT)
- afterward the desire having conceived, doth give birth to sin, and the sin having been perfected, doth bring forth death.
Read in context
- 13ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
- 14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- 15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- 16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
- 17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
Cross references
- Psalm 7:14 ಕೀರ್ತನೆಗಳು 7:14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
- Job 15:35 ಯೋಬನು 15:35ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Romans 5:12–21 ರೋಮಾಪುರದವರಿಗೆ 5:12–21ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು. (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ. ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ. ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ. ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ. ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ). ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು. ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು. ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Genesis 2:17 ಆದಿಕಾಂಡ 2:17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- Isaiah 59:4 ಯೆಶಾಯ 59:4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Romans 6:21–23 ರೋಮಾಪುರದವರಿಗೆ 6:21–23ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು. ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Micah 2:1–3 ಮೀಕ 2:1–3ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ. ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
- Genesis 4:5–8 ಆದಿಕಾಂಡ 4:5–8ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- Genesis 3:17–19 ಆದಿಕಾಂಡ 3:17–19ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Revelation 20:14–15 ಪ್ರಕಟನೆ 20:14–15ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Acts 5:1–3 ಅಪೊಸ್ತಲರ ಕೃತ್ಯಗಳು 5:1–3ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು. ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?