James · chapter 1 · verse 22
James 1:22 in Kannada
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
Neevu vaakyada prakaara nadeyuvavaraagirri; adannu keluvavaru maatrave aagiddu nimmannu neeve mosagolisa bediri.
James 1:22 in English
- King James Version (KJV)
- But be ye doers of the word, and not hearers only, deceiving your own selves.
- World English Bible (WEB)
- But be doers of the word, and not only hearers, deluding your own selves.
- American Standard Version (ASV)
- But be ye doers of the word, and not hearers only, deluding your own selves.
- Bible in Basic English (BBE)
- But be doers of the word, and not only hearers of it, blinding yourselves with false ideas.
- Darby Translation (DBY)
- But be ye doers of [the] word and not hearers only, beguiling yourselves.
- Webster's Bible (WBS)
- But be ye doers of the word, and not hearers only, deceiving your own selves.
- Young's Literal Translation (YLT)
- and become ye doers of the word, and not hearers only, deceiving yourselves,
Read in context
- 20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- 21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- 22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- 23ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
- 24ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
Cross references
- Romans 2:13 ರೋಮಾಪುರದವರಿಗೆ 2:13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
- Luke 6:46–48 ಲೂಕನು 6:46–48ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ? ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ. ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- James 4:17 ಯಾಕೋಬನು 4:17ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- 1 John 2:3 1 ಯೋಹಾನನು 2:3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- James 2:14–20 ಯಾಕೋಬನು 2:14–20ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- Matthew 12:50 ಮತ್ತಾಯನು 12:50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Matthew 7:21–27 ಮತ್ತಾಯನು 7:21–27ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.