James · chapter 2 · verse 13
James 2:13 in Kannada
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
Karune torisade iruvavanige nyaayateerpinalli karuneyu torisalpaduvadilla. Karuneyu nyaayateerpiginta melaagi higguttade.
James 2:13 in English
- King James Version (KJV)
- For he shall have judgment without mercy, that hath shewed no mercy; and mercy rejoiceth against judgment.
- World English Bible (WEB)
- For judgment is without mercy to him who has shown no mercy. Mercy triumphs over judgment.
- American Standard Version (ASV)
- For judgment [is] without mercy to him that hath showed no mercy: mercy glorieth against judgment.
- Bible in Basic English (BBE)
- For the man who has had no mercy will be judged without mercy, but mercy takes pride in overcoming judging.
- Darby Translation (DBY)
- for judgment [will be] without mercy to him that has shewn no mercy. Mercy glories over judgment.
- Webster's Bible (WBS)
- For he shall have judgment without mercy that hath shown no mercy; and mercy rejoiceth against judgment.
- Young's Literal Translation (YLT)
- for the judgment without kindness [is] to him not having done kindness, and exult doth kindness over judgment.
Read in context
- 11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- 12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- 13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- 14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
- 15ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
Cross references
- Matthew 5:7 ಮತ್ತಾಯನು 5:7ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
- Matthew 6:15 ಮತ್ತಾಯನು 6:15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Luke 6:37 ಲೂಕನು 6:37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
- Ephesians 2:4–7 ಎಫೆಸದವರಿಗೆ 2:4–7ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Matthew 18:28–35 ಮತ್ತಾಯನು 18:28–35ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು. ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು. ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು. ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- Psalm 18:25 ಕೀರ್ತನೆಗಳು 18:25ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- Matthew 7:1–2 ಮತ್ತಾಯನು 7:1–2ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Matthew 25:41–46 ಮತ್ತಾಯನು 25:41–46ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 1 John 4:18–19 1 ಯೋಹಾನನು 4:18–19ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ. ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- 1 John 4:8–16 1 ಯೋಹಾನನು 4:8–16ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ. ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ. ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.