James · chapter 2 · verse 22
James 2:22 in Kannada
ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
Avana nambikeyu hege tanna kriyegalondige kaarya nadisi aa kriye galindale nambikeyu siddhige bantembadannu neenu kaanutteeyallaa?
James 2:22 in English
- King James Version (KJV)
- Seest thou how faith wrought with his works, and by works was faith made perfect?
- World English Bible (WEB)
- You see that faith worked with his works, and by works faith was perfected.
- American Standard Version (ASV)
- Thou seest that faith wrought with his works, and by works was faith made perfect;
- Bible in Basic English (BBE)
- You see that his faith was helping his works and was made complete by them;
- Darby Translation (DBY)
- Thou seest that faith wrought with his works, and that by works faith was perfected.
- Webster's Bible (WBS)
- Seest thou how faith wrought with his works, and by works was faith made perfect?
- Young's Literal Translation (YLT)
- dost thou see that the faith was working with his works, and out of the works the faith was perfected?
Read in context
- 20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- 21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
- 22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
- 23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- 24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
Cross references
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- Hebrews 11:17–19 ಇಬ್ರಿಯರಿಗೆ 11:17–19ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- James 2:18 ಯಾಕೋಬನು 2:18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
- 1 John 4:17–18 1 ಯೋಹಾನನು 4:17–18ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ. ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.