James · chapter 3 · verse 15
James 3:15 in Kannada
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
Adu melaninda banda jnyaanavalla; adu bhoosambandha vaadaddu, praakrutabhaavavaadaddu, devvagalige sambandhapattaddu.
James 3:15 in English
- King James Version (KJV)
- This wisdom descendeth not from above, but [is] earthly, sensual, devilish.
- World English Bible (WEB)
- This wisdom is not that which comes down from above, but is earthly, sensual, and demonic.
- American Standard Version (ASV)
- This wisdom is not [a wisdom] that cometh down from above, but is earthly, sensual, devilish.
- Bible in Basic English (BBE)
- This wisdom is not from heaven, but is of the earth and the flesh and the Evil One.
- Darby Translation (DBY)
- This is not the wisdom which comes down from above, but earthly, natural, devilish.
- Webster's Bible (WBS)
- This wisdom descendeth not from above, but [is] earthly, sensual, demoniacal.
- Young's Literal Translation (YLT)
- this wisdom is not descending from above, but earthly, physical, demon-like,
Read in context
- 13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- 14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
- 15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
- 16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- 17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
Cross references
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- John 3:17 ಯೋಹಾನನು 3:17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Jude 1:19 ಯೂದನು 1:19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?