James · chapter 5 · verse 1
James 5:1 in Kannada
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
Dhanikare, nimage baruva durdashe galigaagi kanneeridiri, golaadiri
James 5:1 in English
- King James Version (KJV)
- Go to now, [ye] rich men, weep and howl for your miseries that shall come upon [you].
- World English Bible (WEB)
- Come now, you rich, weep and howl for your miseries that are coming on you.
- American Standard Version (ASV)
- Come now, ye rich, weep and howl for your miseries that are coming upon you.
- Bible in Basic English (BBE)
- Come now, you men of wealth, give yourselves to weeping and crying because of the bitter troubles which are coming to you.
- Darby Translation (DBY)
- Go to now, ye rich, weep, howling over your miseries that [are] coming upon [you].
- Webster's Bible (WBS)
- Come now, [ye] rich men, weep and howl for your miseries that shall come upon [you] .
- Young's Literal Translation (YLT)
- Go, now, ye rich! weep, howling over your miseries that are coming upon [you];
Read in context
- 1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- 2ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
- 3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
Cross references
- Proverbs 11:28 ಜ್ಞಾನೋಕ್ತಿಗಳು 11:28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Luke 12:16–21 ಲೂಕನು 12:16–21ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Luke 6:24–25 ಲೂಕನು 6:24–25ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ. ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Luke 16:19–25 ಲೂಕನು 16:19–25ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Matthew 19:23–24 ಮತ್ತಾಯನು 19:23–24ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
- Micah 6:12 ಮೀಕ 6:12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
- Psalm 73:3–9 ಕೀರ್ತನೆಗಳು 73:3–9ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.