James · chapter 5 · verse 6
James 5:6 in Kannada
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
Neetivantanige dandaneyannu vidhisi kondu haaki ddeeri; avanu nimmannu eduraayisuvavanalla.
James 5:6 in English
- King James Version (KJV)
- Ye have condemned [and] killed the just; [and] he doth not resist you.
- World English Bible (WEB)
- You have condemned and you have murdered the righteous one. He doesn’t resist you.
- American Standard Version (ASV)
- Ye have condemned, ye have killed the righteous [one]; he doth not resist you.
- Bible in Basic English (BBE)
- You have given your decision against the upright man and have put him to death. He puts up no fight against you.
- Darby Translation (DBY)
- ye have condemned, ye have killed the just; he does not resist you.
- Webster's Bible (WBS)
- Ye have condemned [and] killed the just; [and] he doth not resist you.
- Young's Literal Translation (YLT)
- ye did condemn — ye did murder the righteous one, he doth not resist you.
Read in context
- 4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- 5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- 6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- 7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- 8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
Cross references
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- John 19:9–11 ಯೋಹಾನನು 19:9–11ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು. ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Matthew 5:39 ಮತ್ತಾಯನು 5:39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- Acts 8:32 ಅಪೊಸ್ತಲರ ಕೃತ್ಯಗಳು 8:32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
- Luke 22:51–53 ಲೂಕನು 22:51–53ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು. ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ? ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Acts 4:10–12 ಅಪೊಸ್ತಲರ ಕೃತ್ಯಗಳು 4:10–12ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- James 4:2 ಯಾಕೋಬನು 4:2ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
- Acts 22:14 ಅಪೊಸ್ತಲರ ಕೃತ್ಯಗಳು 22:14ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
- Acts 2:22–23 ಅಪೊಸ್ತಲರ ಕೃತ್ಯಗಳು 2:22–23ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.