Jeremiah 1:18 in Kannada
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Igo, samasta deshakke virodhavaagi yehoodada arasarige virodha vaagiyoo adara pradhaanarige virodhavaagiyoo adara yaajakarige virodhavaagiyoo deshada janarige virodhavaagiyoo naane ee hotu ninnannu koteyulla pattanavaagiyoo kabbinada stambhavaagiyoo hittaaleya godegalaagiyoo maadiddene.avaru ninage virodhavaagi yuddha maaduvaru; aadare ninnannu gelluvadilla; ninnannu tappisuvadakke naane ninna sangada iddene endu kartanu annuttaane.
Jeremiah 1:18 in English
- King James Version (KJV)
- For, behold, I have made thee this day a defenced city, and an iron pillar, and brasen walls against the whole land, against the kings of Judah, against the princes thereof, against the priests thereof, and against the people of the land.
- World English Bible (WEB)
- For behold, I have made you today a fortified city, an iron pillar, and bronze walls against the whole land—against the kings of Judah, against its princes, against its priests, and against the people of the land.
- American Standard Version (ASV)
- For, behold, I have made thee this day a fortified city, and an iron pillar, and brazen walls, against the whole land, against the kings of Judah, against the princes thereof, against the priests thereof, and against the people of the land.
- Bible in Basic English (BBE)
- For see, this day have I made you a walled town, and an iron pillar, and walls of brass, against all the land, against the kings of Judah, against its captains, against its priests, and against the people of the land.
- Darby Translation (DBY)
- And I, behold, I appoint thee this day as a strong city, and an iron pillar, and brazen walls, against the whole land; against the kings of Judah, against its princes, against its priests, and against the people of the land.
- Webster's Bible (WBS)
- For behold, I have made thee this day a fortified city, and an iron pillar, and brazen walls against the whole land, against the kings of Judah, against her princes, against her priests, and against the people of the land.
- Young's Literal Translation (YLT)
- And I, lo, I have given thee this day for a fenced city, and for an iron pillar, and for brazen walls over all the land, to the kings of Judah, to its heads, to its priests, and to the people of the land;
Read in context
- 16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
- 17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- 18ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- 19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Cross references
- Isaiah 50:7 ಯೆಶಾಯ 50:7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
- Ezekiel 3:8–9 ಯೆಹೆಜ್ಕೇಲನು 3:8–9ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- Jeremiah 15:20 ಯೆರೆಮೀಯ 15:20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Jeremiah 6:27 ಯೆರೆಮೀಯ 6:27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
- Micah 3:8–9 ಮೀಕ 3:8–9ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
- Jeremiah 34:20–22 ಯೆರೆಮೀಯ 34:20–22ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 36:27–32 ಯೆರೆಮೀಯ 36:27–32ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ. ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು. ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು. ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Jeremiah 37:7 ಯೆರೆಮೀಯ 37:7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
- Jeremiah 38:2 ಯೆರೆಮೀಯ 38:2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- Jeremiah 26:12–15 ಯೆರೆಮೀಯ 26:12–15ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ. ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು. ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ. ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Jeremiah 21:4–30 ಯೆರೆಮೀಯ 21:4–30ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು. ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು-- ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು. ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು. ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- Jeremiah 34:3 ಯೆರೆಮೀಯ 34:3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
Original words (Hebrew)
- I · H589אֲנִי ʼănîy
- made · H5414נָתַן nâthan
- day · H3117יוֹם yôwm
- defenced · H4013מִבְצָר mibtsâr
- city · H5892עִיר ʻîyr
- iron · H1270בַּרְזֶל barzel
- pillar · H5982עַמּוּד ʻammûwd
- brasen · H5178נְחֹשֶׁת nᵉchôsheth
- walls · H2346חוֹמָה chôwmâh
- land · H776אֶרֶץ ʼerets
- kings · H4428מֶלֶךְ melek
- Judah · H3063יְהוּדָה Yᵉhûwdâh
- princes · H8269שַׂר sar
- priests · H3548כֹּהֵן kôhên
- people · H5971עַם ʻam
- land · H776אֶרֶץ ʼerets