Jeremiah · chapter 1 · verse 19
Jeremiah 1:19 in Kannada
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Avaru ninage virodhavaagi yuddha maaduvaru; aadare ninnannu gelluvadilla; ninnannu tappisuvadakke naane ninna sangada iddene endu kartanu annuttaane.
Jeremiah 1:19 in English
- King James Version (KJV)
- And they shall fight against thee; but they shall not prevail against thee; for I [am] with thee, saith the LORD, to deliver thee.
- World English Bible (WEB)
- They will fight against you, but they will not prevail against you; for I am with you”, says the LORD, “to rescue you.”
- American Standard Version (ASV)
- And they shall fight against thee; but they shall not prevail against thee: for I am with thee, saith Jehovah, to deliver thee.
- Bible in Basic English (BBE)
- They will be fighting against you, but they will not overcome you: for I am with you, says the Lord, to give you salvation.
- Darby Translation (DBY)
- And they shall fight against thee, but they shall not prevail against thee: for I am with thee, saith Jehovah, to deliver thee.
- Webster's Bible (WBS)
- And they shall fight against thee; but they shall not prevail against thee; for I [am] with thee, saith the LORD, to deliver thee.
- Young's Literal Translation (YLT)
- and they have fought against thee, and they prevail not against thee; for with thee [am] I, — an affirmation of Jehovah — to deliver thee.
Read in context
- 17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- 18ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- 19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Cross references
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Jeremiah 1:8 ಯೆರೆಮೀಯ 1:8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Psalm 129:2 ಕೀರ್ತನೆಗಳು 129:2ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
- Jeremiah 29:25–32 ಯೆರೆಮೀಯ 29:25–32ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ? ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ. ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ? ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ. ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು. ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ-- ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Jeremiah 26:11–24 ಯೆರೆಮೀಯ 26:11–24ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ. ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ. ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು. ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ. ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು. ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು. ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ-- ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು. ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು. ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು. ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Jeremiah 15:10–21 ಯೆರೆಮೀಯ 15:10–21ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ. ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ? ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ? ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು. ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು. ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ. ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ. ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Jeremiah 37:11–21 ಯೆರೆಮೀಯ 37:11–21ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು. ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು. ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು, ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು. ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Jeremiah 20:1–6 ಯೆರೆಮೀಯ 20:1–6ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು. ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು. ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು. ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು. ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
- Jeremiah 38:6–13 ಯೆರೆಮೀಯ 38:6–13ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು. ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ, ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು. ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು. ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು. ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.