Jeremiah · chapter 1 · verse 3
Jeremiah 1:3 in Kannada
ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
Yehoodada arasanaada yosheeyana maganaagiruva yehoyaa keemana dinagalalliyoo kooda yehoodada arasa naada yosheeyana maganaagiruva chidkeeyana hannondane varushada antyada varegoo aidane tingalalli yeroosalemu sereyaagi oyyalpadu vavaregoo kartana vaakyavu untaayitu.
Jeremiah 1:3 in English
- King James Version (KJV)
- It came also in the days of Jehoiakim the son of Josiah king of Judah, unto the end of the eleventh year of Zedekiah the son of Josiah king of Judah, unto the carrying away of Jerusalem captive in the fifth month.
- World English Bible (WEB)
- It came also in the days of Jehoiakim the son of Josiah, king of Judah, to the end of the eleventh year of Zedekiah, the son of Josiah, king of Judah, to the carrying away of Jerusalem captive in the fifth month.
- American Standard Version (ASV)
- It came also in the days of Jehoiakim the son of Josiah, king of Judah, unto the end of the eleventh year of Zedekiah, the son of Josiah, king of Judah, unto the carrying away of Jerusalem captive in the fifth month.
- Bible in Basic English (BBE)
- And it came again in the days of Jehoiakim, the son of Josiah, king of Judah, up to the eleventh year of Zedekiah, the son of Josiah, king of Judah; till Jerusalem was taken away in the fifth month.
- Darby Translation (DBY)
- it came also in the days of Jehoiakim the son of Josiah, king of Judah, unto the end of the eleventh year of Zedekiah the son of Josiah, king of Judah, unto the carrying away of Jerusalem captive, in the fifth month.
- Webster's Bible (WBS)
- It came also in the days of Jehoiakim the son of Josiah king of Judah, to the end of the eleventh year of Zedekiah the son of Josiah king of Judah, to the carrying away of Jerusalem captive in the fifth month.
- Young's Literal Translation (YLT)
- and it is in the days of Jehoiakim son of Josiah, king of Judah, till the completion of the eleventh year of Zedekiah son of Josiah, king of Judah, till the removal of Jerusalem in the fifth month.
Read in context
- 1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
- 2ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
- 3ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
- 4ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ
- 5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
Cross references
- 2 Chronicles 36:5–8 2 ಪೂರ್ವಕಾಲವೃತ್ತಾಂತ 36:5–8ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
- Jeremiah 39:2 ಯೆರೆಮೀಯ 39:2ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- 2 Kings 23:34 2 ಅರಸುಗಳು 23:34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
- Zechariah 7:5 ಜೆಕರ್ಯ 7:5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- 2 Chronicles 36:11–21 2 ಪೂರ್ವಕಾಲವೃತ್ತಾಂತ 36:11–21ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- Jeremiah 21:1–14 ಯೆರೆಮೀಯ 21:1–14ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು. ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ-- ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು. ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು-- ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು. ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು. ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- 2 Kings 24:17–30 2 ಅರಸುಗಳು 24:17–30ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು. ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು. ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು. ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- 1 Chronicles 3:15 1 ಪೂರ್ವಕಾಲವೃತ್ತಾಂತ 3:15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- Jeremiah 28:1–17 ಯೆರೆಮೀಯ 28:1–17ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ -- ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು. ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು. ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ. ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Jeremiah 34:1–19 ಯೆರೆಮೀಯ 34:1–19ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ-- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು. ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ. ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ. ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ. ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು. ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು. ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು. ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು. ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ-- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು. ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
- Jeremiah 26:1–24 ಯೆರೆಮೀಯ 26:1–24ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು. ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ; ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು. ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು. ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು. ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ. ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ. ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು. ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ. ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು. ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು. ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ-- ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು. ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು. ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು. ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Jeremiah 25:1–3 ಯೆರೆಮೀಯ 25:1–3ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು. ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ-- ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
Original words (Hebrew)
- days · H3117יוֹם yôwm
- Jehoiakim · H3079יְהוֹיָקִים Yᵉhôwyâqîym
- son · H1121בֵּן bên
- Josiah · H2977יֹאשִׁיָּה Yôʼshîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- end · H8552תָּמַם tâmam
- eleventh · H6249עַשְׁתֵּי ʻashtêy
- year · H8141שָׁנֶה shâneh
- Zedekiah · H6667צִדְקִיָּה Tsidqîyâh
- son · H1121בֵּן bên
- Josiah · H2977יֹאשִׁיָּה Yôʼshîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- away · H1540גָּלָה gâlâh
- Jerusalem · H3389יְרוּשָׁלַ͏ִם Yᵉrûwshâlaim
- captive · H1540גָּלָה gâlâh
- fifth · H2549חֲמִישִׁי chămîyshîy
- month · H2320חֹדֶשׁ chôdesh