Jeremiah · chapter 1 · verse 7
Jeremiah 1:7 in Kannada
ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
Aaga kartanu nanage--naanu chikkavanendu helabeda; naanu ninnannu kaluhisuvavarellara balige hogabeku; naanu ninage aajnyaapisuvadannellaa maatanaadabeku.
Jeremiah 1:7 in English
- King James Version (KJV)
- But the LORD said unto me, Say not, I [am] a child: for thou shalt go to all that I shall send thee, and whatsoever I command thee thou shalt speak.
- World English Bible (WEB)
- But the LORD said to me, “Don’t say, ‘I am a child;’ for you must go to whomever I send you, and you must say whatever I command you.
- American Standard Version (ASV)
- But Jehovah said unto me, Say not, I am a child; for to whomsoever I shall send thee thou shalt go, and whatsoever I shall command thee thou shalt speak.
- Bible in Basic English (BBE)
- But the Lord said to me, Do not say, I am a child: for wherever I send you, you are to go, and whatever I give you orders to say, you are to say.
- Darby Translation (DBY)
- But Jehovah said unto me, Say not, I am a child; for thou shalt go to whomsoever I shall send thee, and whatsoever I command thee thou shalt speak.
- Webster's Bible (WBS)
- But the LORD said to me, Say not, I [am] a child: for thou shalt go to all that I shall send thee, and whatever I command thee thou shalt speak.
- Young's Literal Translation (YLT)
- And Jehovah saith unto me, 'Do not say, I [am] a youth, for to all to whom I send thee thou goest, and all that I command thee thou speakest.
Read in context
- 5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- 6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
- 7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- 8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- 9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
Cross references
- Ezekiel 3:27 ಯೆಹೆಜ್ಕೇಲನು 3:27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Mark 16:15–16 ಮಾರ್ಕನು 16:15–16ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ. ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- Numbers 22:20 ಅರಣ್ಯಕಾಂಡ 22:20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
- Ezekiel 3:17–21 ಯೆಹೆಜ್ಕೇಲನು 3:17–21ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Numbers 22:38 ಅರಣ್ಯಕಾಂಡ 22:38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 2 Chronicles 18:13 2 ಪೂರ್ವಕಾಲವೃತ್ತಾಂತ 18:13ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
- Jeremiah 1:17–18 ಯೆರೆಮೀಯ 1:17–18ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Ezekiel 2:3–5 ಯೆಹೆಜ್ಕೇಲನು 2:3–5ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- Exodus 7:1–2 ವಿಮೋಚನಕಾಂಡ 7:1–2ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.