Jeremiah · chapter 10 · verse 12
Jeremiah 10:12 in Kannada
ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
Aatanu bhoomiyannu tanna shaktiyinda untu maadidanu, bhoolokavannu tanna jnyaanadinda sthaapisidanu, aakaashagalannu tanna vivekadinda haasi danu;
Jeremiah 10:12 in English
- King James Version (KJV)
- He hath made the earth by his power, he hath established the world by his wisdom, and hath stretched out the heavens by his discretion.
- World English Bible (WEB)
- God has made the earth by his power. He has established the world by his wisdom, and by his understanding has he stretched out the heavens.
- American Standard Version (ASV)
- He hath made the earth by his power, he hath established the world by his wisdom, and by his understanding hath he stretched out the heavens.
- Bible in Basic English (BBE)
- He has made the earth by his power, he has made the world strong in its place by his wisdom, and by his wise design the heavens have been stretched out.
- Darby Translation (DBY)
- He hath made the earth by his power, he hath established the world by his wisdom, and hath stretched out the heavens by his understanding.
- Webster's Bible (WBS)
- He hath made the earth by his power, he hath established the world by his wisdom, and hath stretched out the heavens by his discretion.
- Young's Literal Translation (YLT)
- The maker of the earth by His power, The establisher of the world by His wisdom, Who, by His understanding, stretched forth the heavens,
Read in context
- 10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- 11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- 12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- 14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
Cross references
- Job 9:8 ಯೋಬನು 9:8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Proverbs 3:19 ಜ್ಞಾನೋಕ್ತಿಗಳು 3:19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- John 1:3 ಯೋಹಾನನು 1:3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- Psalm 24:2 ಕೀರ್ತನೆಗಳು 24:2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Colossians 1:16 ಕೊಲೊಸ್ಸೆಯವರಿಗೆ 1:16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Isaiah 45:18 ಯೆಶಾಯ 45:18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Job 38:4–7 ಯೋಬನು 38:4–7ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- Isaiah 45:12 ಯೆಶಾಯ 45:12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.