Jeremiah · chapter 10 · verse 20
Jeremiah 10:20 in Kannada
ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
Nanna gudaaravu sooreyaayitu; nanna haggagalellaa haridive; nanna makkalu nannannu bittu hogiddaare, avaru illa; innu mele nanna dereyannu haraduvadakkoo nanna paradegalannu nillisuvadakkoo obbanoo illa.
Jeremiah 10:20 in English
- King James Version (KJV)
- My tabernacle is spoiled, and all my cords are broken: my children are gone forth of me, and they [are] not: [there is] none to stretch forth my tent any more, and to set up my curtains.
- World English Bible (WEB)
- My tent has been destroyed, and all my cords are broken. My children have gone away from me, and they are no more. There is no one to spread my tent any more, to set up my curtains.
- American Standard Version (ASV)
- My tent is destroyed, and all my cords are broken: my children are gone forth from me, and they are not: there is none to spread my tent any more, and to set up my curtains.
- Bible in Basic English (BBE)
- My tent is pulled down and all my cords are broken: my children have gone from me, and they are not: no longer is there anyone to give help in stretching out my tent and hanging up my curtains.
- Darby Translation (DBY)
- My tent is despoiled, and all my cords are broken; my children are gone forth from me, and they are not; there is none to stretch forth my tent any more, and to set up my curtains.
- Webster's Bible (WBS)
- My tabernacle is laid waste, and all my cords are broken: my children are gone from me, and they [are] not: [there is] none to stretch forth my tent any more, and to set up my curtains.
- Young's Literal Translation (YLT)
- My tent hath been spoiled, And all my cords have been broken, My sons have gone out from me, and they are not, There is none stretching out any more my tent, And raising up my curtains.
Read in context
- 18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
- 19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
- 20ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
- 21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
- 22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
Cross references
- Jeremiah 4:20 ಯೆರೆಮೀಯ 4:20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Isaiah 49:20–22 ಯೆಶಾಯ 49:20–22ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- Isaiah 54:2 ಯೆಶಾಯ 54:2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
- Isaiah 51:16 ಯೆಶಾಯ 51:16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
- Lamentations 1:5 ಪ್ರಲಾಪಗಳು 1:5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
- Proverbs 12:7 ಜ್ಞಾನೋಕ್ತಿಗಳು 12:7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- Job 7:8 ಯೋಬನು 7:8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
- Lamentations 2:4–6 ಪ್ರಲಾಪಗಳು 2:4–6ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ. ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ. ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.