Jeremiah · chapter 11 · verse 12
Jeremiah 11:12 in Kannada
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
Aaga yehoodada pattanagaloo yeroosalemina nivaasigaloo hogi taavu dhoopavannarpisuva devarugalige kooguvaru; ivu avara kedina kaaladalli avarannu rakshisuvade illa.
Jeremiah 11:12 in English
- King James Version (KJV)
- Then shall the cities of Judah and inhabitants of Jerusalem go, and cry unto the gods unto whom they offer incense: but they shall not save them at all in the time of their trouble.
- World English Bible (WEB)
- Then the cities of Judah and the inhabitants of Jerusalem will go and cry to the gods to which they offer incense, but they will not save them at all in the time of their trouble.
- American Standard Version (ASV)
- Then shall the cities of Judah and the inhabitants of Jerusalem go and cry unto the gods unto which they offer incense: but they will not save them at all in the time of their trouble.
- Bible in Basic English (BBE)
- Then the towns of Judah and the people of Jerusalem will go crying for help to the gods to whom they have been burning perfumes: but they will give them no salvation in the time of their trouble.
- Darby Translation (DBY)
- Then shall the cities of Judah and inhabitants of Jerusalem go and cry unto the gods unto whom they have burned incense; but they shall not save them at all in the time of their trouble.
- Webster's Bible (WBS)
- Then shall the cities of Judah and inhabitants of Jerusalem go, and cry to the gods to which they offer incense: but they shall not save them at all in the time of their trouble.
- Young's Literal Translation (YLT)
- And the cities of Judah, and inhabitants of Jerusalem have gone, And they have cried unto the gods, To whom they are making perfume, And they give no deliverance at all to them, In the time of their vexation.
Read in context
- 10ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- 11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- 12ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
- 13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
- 14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
Cross references
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- Deuteronomy 32:37 ಧರ್ಮೋಪದೇಶಕಾಂಡ 32:37ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Judges 10:14 ನ್ಯಾಯಸ್ಥಾಪಕರು 10:14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
- Jeremiah 44:17–27 ಯೆರೆಮೀಯ 44:17–27ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು. ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ? ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ-- ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ? ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ. ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ. ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ. ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ. ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
Original words (Hebrew)
- cities · H5892עִיר ʻîyr
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- go · H1980הָלַךְ hâlak
- cry · H2199זָעַק zâʻaq
- gods · H430אֱלֹהִים ʼĕlôhîym
- incense · H6999קָטַר qâṭar
- save · H3467יָשַׁע yâshaʻ
- all · H3467יָשַׁע yâshaʻ
- time · H6256עֵת ʻêth
- trouble · H7451רַע raʻ