Jeremiah · chapter 11 · verse 9
Jeremiah 11:9 in Kannada
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
Idallade, kartanu nanage heliddenandare-- yehoodada manushyaralliyoo yeroosalemina nivaasigalalliyoo olasanchu kandu bandide.
Jeremiah 11:9 in English
- King James Version (KJV)
- And the LORD said unto me, A conspiracy is found among the men of Judah, and among the inhabitants of Jerusalem.
- World English Bible (WEB)
- The LORD said to me, “A conspiracy is found among the men of Judah, and among the inhabitants of Jerusalem.
- American Standard Version (ASV)
- And Jehovah said unto me, A conspiracy is found among the men of Judah, and among the inhabitants of Jerusalem.
- Bible in Basic English (BBE)
- And the Lord said to me, There is an evil design at work among the men of Judah and the people of Jerusalem.
- Darby Translation (DBY)
- And Jehovah said unto me, A conspiracy is found among the men of Judah, and among the inhabitants of Jerusalem.
- Webster's Bible (WBS)
- And the LORD said to me, A conspiracy is found among the men of Judah, and among the inhabitants of Jerusalem.
- Young's Literal Translation (YLT)
- And Jehovah saith unto me: 'A conspiracy is found in the men of Judah, And in the inhabitants of Jerusalem.
Read in context
- 7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
- 8ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- 9ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
- 10ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- 11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
Cross references
- Hosea 6:9 ಹೋಶೇಯ 6:9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
- John 11:53 ಯೋಹಾನನು 11:53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Ezekiel 22:25–31 ಯೆಹೆಜ್ಕೇಲನು 22:25–31ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ. ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ. ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
- Matthew 21:38–39 ಮತ್ತಾಯನು 21:38–39ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Acts 23:12–15 ಅಪೊಸ್ತಲರ ಕೃತ್ಯಗಳು 23:12–15ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Micah 7:2–3 ಮೀಕ 7:2–3ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.