Jeremiah · chapter 12 · verse 17
Jeremiah 12:17 in Kannada
ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Aadare avaru keladehodare, aa janaangavannu sampoo rnavaagi kittu naashamaaduvenu endu kartanu annuttaane.
Jeremiah 12:17 in English
- King James Version (KJV)
- But if they will not obey, I will utterly pluck up and destroy that nation, saith the LORD.
- World English Bible (WEB)
- But if they will not hear, then I will pluck up that nation, plucking up and destroying it,” says the LORD.
- American Standard Version (ASV)
- But if they will not hear, then will I pluck up that nation, plucking up and destroying it, saith Jehovah.
- Bible in Basic English (BBE)
- But if they will not give ear, then I will have that nation uprooted, and given to destruction, says the Lord.
- Darby Translation (DBY)
- And if they will not obey, I will utterly pluck up and destroy that nation, saith Jehovah.
- Webster's Bible (WBS)
- But if they will not obey, I will utterly pluck up and destroy that nation, saith the LORD.
- Young's Literal Translation (YLT)
- And if they do not hearken, Then I have plucked up that nation, Plucking up and destroying, An affirmation of Jehovah!'
Read in context
- 15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
- 16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- 17ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Cross references
- Isaiah 60:12 ಯೆಶಾಯ 60:12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
- Psalm 2:8–12 ಕೀರ್ತನೆಗಳು 2:8–12ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- 1 Peter 2:6–8 1 ಪೇತ್ರನು 2:6–8ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Jeremiah 12:14–17 ಯೆರೆಮೀಯ 12:14–17ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು. ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು. ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Zechariah 14:16–19 ಜೆಕರ್ಯ 14:16–19ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Daniel 11:4 ದಾನಿಯೇಲನು 11:4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Jeremiah 18:7 ಯೆರೆಮೀಯ 18:7ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
- Daniel 7:4–8 ದಾನಿಯೇಲನು 7:4–8ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Ezekiel 19:12 ಯೆಹೆಜ್ಕೇಲನು 19:12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.