Jeremiah · chapter 12 · verse 9
Jeremiah 12:9 in Kannada
ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
Nanna svaastyavu nanage chitra varnada pakshiyaayitu. Suttalaagi pakshigalu adakke virodhavaagive; banni, holada mrugagala nnellaa koodisiri, tinnuvadakke avugalannu tanniri;
Jeremiah 12:9 in English
- King James Version (KJV)
- Mine heritage [is] unto me [as] a speckled bird, the birds round about [are] against her; come ye, assemble all the beasts of the field, come to devour.
- World English Bible (WEB)
- Is my heritage to me as a speckled bird of prey? Are the birds of prey against her all around? Go, assemble all the animals of the field. Bring them to devour.
- American Standard Version (ASV)
- Is my heritage unto me as a speckled bird of prey? are the birds of prey against her round about? go ye, assemble all the beasts of the field, bring them to devour.
- Bible in Basic English (BBE)
- My heritage is like a brightly coloured bird to me; the cruel birds are attacking her on every side: go, get together all the beasts of the field, make them come for destruction.
- Darby Translation (DBY)
- My heritage is unto me [as] a speckled bird of prey; the birds of prey round about are against her. Go, assemble all the beasts of the field, bring them to devour.
- Webster's Bible (WBS)
- My heritage [is] to me [as] a speckled bird, the birds around [are] against her; come ye, assemble all the beasts of the field, come to devour.
- Young's Literal Translation (YLT)
- A speckled fowl [is] Mine inheritance to Me? Is the fowl round about against her? Come, assemble, every beast of the field, Come ye for food.
Read in context
- 7ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
- 8ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
- 9ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
- 10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
- 11ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
Cross references
- Isaiah 56:9 ಯೆಶಾಯ 56:9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
- Jeremiah 7:33 ಯೆರೆಮೀಯ 7:33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Ezekiel 23:22–25 ಯೆಹೆಜ್ಕೇಲನು 23:22–25ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
- Revelation 19:17–18 ಪ್ರಕಟನೆ 19:17–18ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- 2 Kings 24:2 2 ಅರಸುಗಳು 24:2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
- Jeremiah 2:15 ಯೆರೆಮೀಯ 2:15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- Ezekiel 39:17–20 ಯೆಹೆಜ್ಕೇಲನು 39:17–20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 16:36–37 ಯೆಹೆಜ್ಕೇಲನು 16:36–37ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- Jeremiah 15:3 ಯೆರೆಮೀಯ 15:3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.