Jeremiah · chapter 13 · verse 10
Jeremiah 13:10 in Kannada
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
Nanna vaakyagalannu kelalollade tamma hrudayada kalpaneyante nadakondu bere devarugalannu sevisuvadakkoo avugalannu aaraadhisuvadakkoo himbaalisuva ee ketta janaru yaava kelasakkaadaroo baarada ee nadukattina haagiruvaru.
Jeremiah 13:10 in English
- King James Version (KJV)
- This evil people, which refuse to hear my words, which walk in the imagination of their heart, and walk after other gods, to serve them, and to worship them, shall even be as this girdle, which is good for nothing.
- World English Bible (WEB)
- This evil people, who refuse to hear my words, who walk in the stubbornness of their heart, and have gone after other gods to serve them and to worship them, will even be as this belt, which is profitable for nothing.
- American Standard Version (ASV)
- This evil people, that refuse to hear my words, that walk in the stubbornness of their heart, and are gone after other gods to serve them, and to worship them, shall even be as this girdle, which is profitable for nothing.
- Bible in Basic English (BBE)
- These evil people who say they will not give ear to my words, who go on in the pride of their hearts and have become servants and worshippers of other gods, will become like this band which is of no use for anything.
- Darby Translation (DBY)
- This evil people, who refuse to hear my words, who walk in the stubbornness of their heart, and go after other gods, to serve them and to worship them, shall even be as this girdle which is good for nothing.
- Webster's Bible (WBS)
- This evil people, who refuse to hear my words, who walk in the imagination of their heart, and walk after other gods, to serve them, and to worship them, shall even be as this girdle, which is good for nothing.
- Young's Literal Translation (YLT)
- This evil people, who refuse to hear My words, Who walk in the stubbornness of their heart, And go after other gods to serve them, And to bow themselves to them, Yea it is — as this girdle, that is not profitable for anything.
Read in context
- 8ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 9ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
- 10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
- 11ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
- 12ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
Cross references
- Jeremiah 9:14 ಯೆರೆಮೀಯ 9:14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- Jeremiah 16:12 ಯೆರೆಮೀಯ 16:12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Numbers 14:11 ಅರಣ್ಯಕಾಂಡ 14:11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Jeremiah 3:17 ಯೆರೆಮೀಯ 3:17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- Jeremiah 13:7 ಯೆರೆಮೀಯ 13:7ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
- Jeremiah 11:7–8 ಯೆರೆಮೀಯ 11:7–8ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು, ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- Ephesians 4:17–19 ಎಫೆಸದವರಿಗೆ 4:17–19ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Jeremiah 7:24–28 ಯೆರೆಮೀಯ 7:24–28ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
- Jeremiah 25:3–7 ಯೆರೆಮೀಯ 25:3–7ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ. ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ. ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು. ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
Original words (Hebrew)
- evil · H7451רַע raʻ
- people · H5971עַם ʻam
- refuse · H3987מֵאֵן mêʼên
- hear · H8085שָׁמַע shâmaʻ
- words · H1697דָּבָר dâbâr
- walk · H1980הָלַךְ hâlak
- imagination · H8307שְׁרִירוּת shᵉrîyrûwth
- heart · H3820לֵב lêb
- walk · H3212יָלַךְ yâlak
- after · H310אַחַר ʼachar
- other · H312אַחֵר ʼachêr
- gods · H430אֱלֹהִים ʼĕlôhîym
- serve · H5647עָבַד ʻâbad
- worship · H7812שָׁחָה shâchâh
- girdle · H232אֵזוֹר ʼêzôwr
- good · H6743צָלַח tsâlach