Jeremiah · chapter 13 · verse 19
Jeremiah 13:19 in Kannada
ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
Dakshinada pattanagalu tereyuva vanillade muchchalpaduvavu, yehoodavellavoo sampoornavaagi sereyaagi oyyalpaduvadu.
Jeremiah 13:19 in English
- King James Version (KJV)
- The cities of the south shall be shut up, and none shall open [them:] Judah shall be carried away captive all of it, it shall be wholly carried away captive.
- World English Bible (WEB)
- The cities of the South are shut up, and there is no one to open them. Judah is carried away captive: all of them. They are wholly carried away captive.
- American Standard Version (ASV)
- The cities of the South are shut up, and there is none to open them: Judah is carried away captive, all of it; it is wholly carried away captive.
- Bible in Basic English (BBE)
- The towns of the south are shut up, and there is no one to make them open: Judah is taken away as prisoners; all Judah is taken away as prisoners.
- Darby Translation (DBY)
- The cities of the south are shut up, and there is none to open [them]; all Judah is carried away captive: it is wholly carried away captive.
- Webster's Bible (WBS)
- The cities of the south shall be shut up, and none shall open [them] ; Judah shall be carried away captive all of it, it shall be wholly carried away captive.
- Young's Literal Translation (YLT)
- The cities of the south have been shut up, And there is none opening, Judah hath been removed — all of her, She hath been removed completely —
Read in context
- 17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- 18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- 19ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
- 20ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
- 21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
Cross references
- Jeremiah 52:27 ಯೆರೆಮೀಯ 52:27ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- Deuteronomy 28:52 ಧರ್ಮೋಪದೇಶಕಾಂಡ 28:52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- Jeremiah 39:9 ಯೆರೆಮೀಯ 39:9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- Jeremiah 52:30 ಯೆರೆಮೀಯ 52:30ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- 2 Kings 25:21 2 ಅರಸುಗಳು 25:21ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Deuteronomy 28:64–68 ಧರ್ಮೋಪದೇಶಕಾಂಡ 28:64–68ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Ezekiel 20:46–47 ಯೆಹೆಜ್ಕೇಲನು 20:46–47ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು. ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Jeremiah 17:26 ಯೆರೆಮೀಯ 17:26ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Jeremiah 20:4 ಯೆರೆಮೀಯ 20:4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
- Jeremiah 33:13 ಯೆರೆಮೀಯ 33:13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.