Jeremiah · chapter 13 · verse 25
Jeremiah 13:25 in Kannada
ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
Ide ninna bhaagavu, nanninda ninage alate maadida paalu endu kartanu annuttaane; nannannu maretubittu sullinalli bharavasavittiddi.
Jeremiah 13:25 in English
- King James Version (KJV)
- This [is] thy lot, the portion of thy measures from me, saith the LORD; because thou hast forgotten me, and trusted in falsehood.
- World English Bible (WEB)
- This is your lot, the portion measured to you from me,” says the LORD, “because you have forgotten me, and trusted in falsehood.”
- American Standard Version (ASV)
- This is thy lot, the portion measured unto thee from me, saith Jehovah; because thou hast forgotten me, and trusted in falsehood.
- Bible in Basic English (BBE)
- This is your fate, the part measured out to you by me, says the Lord, because you have put me out of your memory and put your faith in what is false.
- Darby Translation (DBY)
- This shall be thy lot, thy measured portion from me, saith Jehovah; because thou hast forgotten me, and confided in falsehood.
- Webster's Bible (WBS)
- This [is] thy lot, the portion of thy measures from me, saith the LORD; because thou hast forgotten me, and trusted in falsehood.
- Young's Literal Translation (YLT)
- This [is] thy lot, the portion of thy measures from Me — an affirmation of Jehovah, Because thou hast forgotten me, And dost trust in falsehood.
Read in context
- 23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- 24ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
- 25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- 26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- 27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Cross references
- Job 20:29 ಯೋಬನು 20:29ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Psalm 9:17 ಕೀರ್ತನೆಗಳು 9:17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- Jeremiah 2:32 ಯೆರೆಮೀಯ 2:32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Matthew 24:51 ಮತ್ತಾಯನು 24:51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Jeremiah 7:4–8 ಯೆರೆಮೀಯ 7:4–8ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
- Isaiah 28:15 ಯೆಶಾಯ 28:15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Psalm 106:21–22 ಕೀರ್ತನೆಗಳು 106:21–22ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- Deuteronomy 32:16–18 ಧರ್ಮೋಪದೇಶಕಾಂಡ 32:16–18ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- Deuteronomy 32:37–38 ಧರ್ಮೋಪದೇಶಕಾಂಡ 32:37–38ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
- Isaiah 17:4 ಯೆಶಾಯ 17:4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.