Jeremiah · chapter 13 · verse 7
Jeremiah 13:7 in Kannada
ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
Aaga naanu yoophreteesige hogi agedu aa dattiyannu naanu adagisiddallinda tegedenu; igo, aa dattiyu yaava kelasakkaadaroo baarade kettu hogittu.
Jeremiah 13:7 in English
- King James Version (KJV)
- Then I went to Euphrates, and digged, and took the girdle from the place where I had hid it: and, behold, the girdle was marred, it was profitable for nothing.
- World English Bible (WEB)
- Then I went to the Euphrates, and dug, and took the belt from the place where I had hidden it; and behold, the belt was ruined. It was profitable for nothing.
- American Standard Version (ASV)
- Then I went to the Euphrates, and digged, and took the girdle from the place where I had hid it; and, behold, the girdle was marred, it was profitable for nothing.
- Bible in Basic English (BBE)
- So I went to Parah and, uncovering the hole, took the band from the place where I had put it away: and the band was damaged and of no use for anything.
- Darby Translation (DBY)
- And I went to the Euphrates, and digged, and took the girdle from the place where I had hid it; and behold, the girdle was spoiled, it was good for nothing.
- Webster's Bible (WBS)
- Then I went to Euphrates, and digged, and took the girdle from the place where I had hid it: and behold, the girdle was marred, it was profitable for nothing.
- Young's Literal Translation (YLT)
- and I go to Phrat, and dig, and take the girdle from the place where I had hid it; and lo, the girdle hath been marred, it is not profitable for anything.
Read in context
- 5ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
- 6ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
- 7ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
- 8ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 9ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
Cross references
- Romans 3:12 ರೋಮಾಪುರದವರಿಗೆ 3:12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Luke 14:34–35 ಲೂಕನು 14:34–35ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Philemon 1:11 ಫಿಲೆಮೋನನಿಗೆ 1:11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
- Jeremiah 13:10 ಯೆರೆಮೀಯ 13:10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
- Zechariah 3:3–4 ಜೆಕರ್ಯ 3:3–4ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Ezekiel 15:3–5 ಯೆಹೆಜ್ಕೇಲನು 15:3–5ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
- Jeremiah 24:1–8 ಯೆರೆಮೀಯ 24:1–8ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು. ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು. ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು. ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು. ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು. ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.