Jeremiah · chapter 15 · verse 1
Jeremiah 15:1 in Kannada
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
Aaga kartanu nanage heliddenandare --mosheyoo samuvelanoo nanna munde nintaroo nanna manassu ee janara mele iruvadilla. Avarannu nanna sannidhiyinda kaluhisi bidu; avaru hogali.
Jeremiah 15:1 in English
- King James Version (KJV)
- Then said the LORD unto me, Though Moses and Samuel stood before me, [yet] my mind [could] not [be] toward this people: cast [them] out of my sight, and let them go forth.
- World English Bible (WEB)
- Then the LORD said to me, “Though Moses and Samuel stood before me, yet my mind would not turn toward this people. Cast them out of my sight, and let them go out!
- American Standard Version (ASV)
- Then said Jehovah unto me, Though Moses and Samuel stood before me, yet my mind would not be toward this people: cast them out of my sight, and let them go forth.
- Bible in Basic English (BBE)
- Then the Lord said to me, Even if Moses and Samuel came before me, I would have no desire for this people: send them away from before me, and let them go.
- Darby Translation (DBY)
- And Jehovah said unto me, Though Moses and Samuel stood before me, my soul [would] not [turn] toward this people. Send [them] out of my sight, and let them go forth.
- Webster's Bible (WBS)
- Then said the LORD to me, Though Moses and Samuel stood before me, [yet] my mind [could] not [be] towards this people: cast [them] out of my sight, and let them go forth.
- Young's Literal Translation (YLT)
- And Jehovah saith unto me: Though Moses and Samuel should stand before Me, My soul is not toward this people, Send from before My face, and they go out.
Read in context
- 1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- 2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- 3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
Cross references
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 14:20–21 ಯೆಹೆಜ್ಕೇಲನು 14:20–21ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Jeremiah 14:11 ಯೆರೆಮೀಯ 14:11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
- Jeremiah 11:14 ಯೆರೆಮೀಯ 11:14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
- Psalm 106:23 ಕೀರ್ತನೆಗಳು 106:23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
- Jeremiah 7:15–16 ಯೆರೆಮೀಯ 7:15–16ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
- Exodus 32:11–14 ವಿಮೋಚನಕಾಂಡ 32:11–14ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು? ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು. ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- Psalm 99:6 ಕೀರ್ತನೆಗಳು 99:6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- 2 Kings 17:20 2 ಅರಸುಗಳು 17:20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Jeremiah 52:3 ಯೆರೆಮೀಯ 52:3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- 1 Samuel 7:9 1 ಸಮುವೇಲನು 7:9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.