Jeremiah · chapter 15 · verse 14
Jeremiah 15:14 in Kannada
ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
Ninnannu ninage tiliyada deshadalli ninna shatruga londige haaduhoguvante maaduvenu. Yaakandare nanna kopadalli benki hattide, adu nimma mele uriyuvadu.
Jeremiah 15:14 in English
- King James Version (KJV)
- And I will make [thee] to pass with thine enemies into a land [which] thou knowest not: for a fire is kindled in mine anger, [which] shall burn upon you.
- World English Bible (WEB)
- I will make them to pass with your enemies into a land which you don’t know; for a fire is kindled in my anger, which will burn on you.”
- American Standard Version (ASV)
- And I will make [them] to pass with thine enemies into a land which thou knowest not; for a fire is kindled in mine anger, which shall burn upon you.
- Bible in Basic English (BBE)
- They will go away with your haters into a land which is strange to you: for my wrath is on fire with a flame which will be burning on you.
- Darby Translation (DBY)
- and I will make [them] to pass with thine enemies into a land that thou knowest not: for a fire is kindled in mine anger; it shall burn upon you.
- Webster's Bible (WBS)
- And I will make [thee] to pass with thy enemies into a land [which] thou knowest not: for a fire is kindled in my anger, [which] shall burn upon you.
- Young's Literal Translation (YLT)
- And I have caused thine enemies To pass over into the land — Thou hast not known, For a fire hath been kindled in Mine anger, Against you it doth burn.
Read in context
- 12ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
- 13ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
- 14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
- 15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
- 16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
Cross references
- Jeremiah 16:13 ಯೆರೆಮೀಯ 16:13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Jeremiah 17:4 ಯೆರೆಮೀಯ 17:4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Psalm 21:9 ಕೀರ್ತನೆಗಳು 21:9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Isaiah 66:15–16 ಯೆಶಾಯ 66:15–16ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.