Jeremiah · chapter 15 · verse 18
Jeremiah 15:18 in Kannada
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
Eke nanna novu nityavaagiyoo nanna gaayavu vaasiyaagalo lladeyoo svasthavaagadeyoo ide? Neenu nanage ottaare neeru battuva kalla toreyanteyoo sthira villada neerinanteyoo irabeko.
Jeremiah 15:18 in English
- King James Version (KJV)
- Why is my pain perpetual, and my wound incurable, [which] refuseth to be healed? wilt thou be altogether unto me as a liar, [and as] waters [that] fail?
- World English Bible (WEB)
- Why is my pain perpetual, and my wound incurable, which refuses to be healed? Will you indeed be to me as a deceitful brook, like waters that fail?
- American Standard Version (ASV)
- Why is my pain perpetual, and my wound incurable, which refuseth to be healed? wilt thou indeed be unto me as a deceitful [brook], as waters that fail?
- Bible in Basic English (BBE)
- Why is my pain unending and my wound without hope of being made well? Sorrow is mine, for you are to me as a stream offering false hope and as waters which are not certain.
- Darby Translation (DBY)
- Why is my pain perpetual, and my wound incurable? It refuseth to be healed. Wilt thou be altogether unto me as a treacherous [spring], [as] waters that fail?
- Webster's Bible (WBS)
- Why is my pain perpetual, and my wound incurable, [which] refuseth to be healed? wilt thou be altogether to me as a liar, [and as] waters [that] fail?
- Young's Literal Translation (YLT)
- Why hath my pain been perpetual? And my wound incurable? It hath refused to be healed, Thou art surely to me as a failing stream, Waters not stedfast.
Read in context
- 16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- 17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- 18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- 19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- 20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Cross references
- Jeremiah 30:15 ಯೆರೆಮೀಯ 30:15ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
- Job 34:6 ಯೋಬನು 34:6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- Micah 1:9 ಮೀಕ 1:9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Jeremiah 20:7 ಯೆರೆಮೀಯ 20:7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
- Psalm 6:3 ಕೀರ್ತನೆಗಳು 6:3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- Jeremiah 30:12 ಯೆರೆಮೀಯ 30:12ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- Psalm 13:1–3 ಕೀರ್ತನೆಗಳು 13:1–3ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು? ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Jeremiah 14:3 ಯೆರೆಮೀಯ 14:3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- Job 6:15–20 ಯೋಬನು 6:15–20ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ. ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ. ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ. ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ. ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ. ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
- Jeremiah 1:18–19 ಯೆರೆಮೀಯ 1:18–19ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Lamentations 3:1–18 ಪ್ರಲಾಪಗಳು 3:1–18ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ. ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ. ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ. ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ. ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ. ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ. ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ. ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ. ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ. ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ. ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ. ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ. ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ. ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ. ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ. ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ. ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು. ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ