Jeremiah · chapter 15 · verse 5
Jeremiah 15:5 in Kannada
ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
O yeroosaleme, ninna mele yaaroo kanikarapaduvaru? Ninagoskara yaaru duhkhisuvaru? Ninna kshemavannu kuritu keluvadakke yaaru saviాpa baruvaru?
Jeremiah 15:5 in English
- King James Version (KJV)
- For who shall have pity upon thee, O Jerusalem? or who shall bemoan thee? or who shall go aside to ask how thou doest?
- World English Bible (WEB)
- For who will have pity on you, Jerusalem? Who will mourn you? Who will come to ask of your welfare?
- American Standard Version (ASV)
- For who will have pity upon thee, O Jerusalem? or who will bemoan thee? or who will turn aside to ask of thy welfare?
- Bible in Basic English (BBE)
- For who will have pity on you, O Jerusalem? and who will have sorrow for you? or who will go out of his way to see how you are?
- Darby Translation (DBY)
- For who shall have pity upon thee, Jerusalem? and who shall bemoan thee? and who shall turn aside to ask after thy welfare?
- Webster's Bible (WBS)
- For who shall have pity upon thee, O Jerusalem? or who shall bemoan thee? or who shall go aside to ask concerning thy welfare?
- Young's Literal Translation (YLT)
- For who hath pity on thee, O Jerusalem? And who doth bemoan for thee? And who turneth aside to ask of thy welfare?
Read in context
- 3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- 4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- 5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
- 6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
- 7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
Cross references
- Isaiah 51:19 ಯೆಶಾಯ 51:19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
- Nahum 3:7 ನಹೂಮ 3:7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Psalm 69:20 ಕೀರ್ತನೆಗಳು 69:20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- 1 Samuel 17:22 1 ಸಮುವೇಲನು 17:22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- Jeremiah 16:5 ಯೆರೆಮೀಯ 16:5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
- 1 Samuel 25:5 1 ಸಮುವೇಲನು 25:5ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
- Jeremiah 13:14 ಯೆರೆಮೀಯ 13:14ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Lamentations 1:12–16 ಪ್ರಲಾಪಗಳು 1:12–16ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ. ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ. ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ. ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ. ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Exodus 18:7 ವಿಮೋಚನಕಾಂಡ 18:7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- Job 19:21 ಯೋಬನು 19:21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.