Jeremiah · chapter 17 · verse 21
Jeremiah 17:21 in Kannada
ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
Kartanu heege heluttaane--nimage neeve echcharikeyaagirri; sabbattina divasadalli horeyannu hottukondu illave yeroosalemina baagilugalolage takkondu barabediri.
Jeremiah 17:21 in English
- King James Version (KJV)
- Thus saith the LORD; Take heed to yourselves, and bear no burden on the sabbath day, nor bring [it] in by the gates of Jerusalem;
- World English Bible (WEB)
- The LORD says, “Be careful, and bear no burden on the Sabbath day, nor bring it in by the gates of Jerusalem.
- American Standard Version (ASV)
- Thus saith Jehovah, Take heed to yourselves, and bear no burden on the sabbath day, nor bring it in by the gates of Jerusalem;
- Bible in Basic English (BBE)
- This is what the Lord has said: See to yourselves, that you take up no weight on the Sabbath day, or take it in through the doors of Jerusalem;
- Darby Translation (DBY)
- thus saith Jehovah: Take heed to your souls, and bear no burden on the sabbath day, and bring nothing in through the gates of Jerusalem;
- Webster's Bible (WBS)
- Thus saith the LORD; Take heed to yourselves, and bear no burden on the sabbath day, nor bring [it] in by the gates of Jerusalem;
- Young's Literal Translation (YLT)
- Thus said Jehovah, Take ye heed to yourselves, And ye bear not a burden on the day of rest, Nor have ye brought [it] in by the gates of Jerusalem.
Read in context
- 19ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
- 20ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
- 21ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
- 22ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
- 23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
Cross references
- Nehemiah 13:15–21 ನೆಹೆಮೀಯ 13:15–21ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು. ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು. ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;
- Numbers 15:32–36 ಅರಣ್ಯಕಾಂಡ 15:32–36ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- John 5:9–12 ಯೋಹಾನನು 5:9–12ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು. ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
- Deuteronomy 11:16 ಧರ್ಮೋಪದೇಶಕಾಂಡ 11:16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Deuteronomy 4:15 ಧರ್ಮೋಪದೇಶಕಾಂಡ 4:15ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
- Hebrews 12:15–16 ಇಬ್ರಿಯರಿಗೆ 12:15–16ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Joshua 23:11 ಯೆಹೋಶುವ 23:11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
- Jeremiah 17:22–27 ಯೆರೆಮೀಯ 17:22–27ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು. ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.