Jeremiah · chapter 17 · verse 5
Jeremiah 17:5 in Kannada
ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
Kartanu heege heluttaane--manushyanalli nambike ittu avanannu tanna baahuvannaagi maadi kondu kartana kadeyinda yaavana hrudayavu tolaguvado avanu shaapagrastanu.
Jeremiah 17:5 in English
- King James Version (KJV)
- Thus saith the LORD; Cursed [be] the man that trusteth in man, and maketh flesh his arm, and whose heart departeth from the LORD.
- World English Bible (WEB)
- The LORD says: “Cursed is the man who trusts in man, relies on strength of flesh, and whose heart departs from the LORD.
- American Standard Version (ASV)
- Thus saith Jehovah: Cursed is the man that trusteth in man, and maketh flesh his arm, and whose heart departeth from Jehovah.
- Bible in Basic English (BBE)
- This is what the Lord has said: Cursed is the man who puts his faith in man, and makes flesh his arm, and whose heart is turned away from the Lord.
- Darby Translation (DBY)
- Thus saith Jehovah: Cursed is the man that confideth in man, and maketh flesh his arm, and whose heart departeth from Jehovah.
- Webster's Bible (WBS)
- Thus saith the LORD; Cursed [be] the man that trusteth in man, and maketh flesh his arm, and whose heart departeth from the LORD.
- Young's Literal Translation (YLT)
- Thus said Jehovah: Cursed [is] the man who doth trust in man, And hath made flesh his arm, And from Jehovah whose heart turneth.
Read in context
- 3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
- 4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- 5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
- 6ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- 7ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
Cross references
- Psalm 118:8–9 ಕೀರ್ತನೆಗಳು 118:8–9ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Psalm 146:3–4 ಕೀರ್ತನೆಗಳು 146:3–4ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- 2 Chronicles 32:8 2 ಪೂರ್ವಕಾಲವೃತ್ತಾಂತ 32:8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- Isaiah 31:1–9 ಯೆಶಾಯ 31:1–9ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು. ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು. ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ. ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು. ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ. ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Isaiah 30:1–7 ಯೆಶಾಯ 30:1–7ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Psalm 18:21 ಕೀರ್ತನೆಗಳು 18:21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
- Ezekiel 29:6–7 ಯೆಹೆಜ್ಕೇಲನು 29:6–7ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Hosea 1:2 ಹೋಶೇಯ 1:2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.