Jeremiah · chapter 18 · verse 2
Jeremiah 18:2 in Kannada
ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.
Eddu kumbaarana manege ilidu hogu; alli ninage nanna vaakyagalannu kelamaaduvenu embade.
Jeremiah 18:2 in English
- King James Version (KJV)
- Arise, and go down to the potter’s house, and there I will cause thee to hear my words.
- World English Bible (WEB)
- “Arise, and go down to the potter’s house, and there I will cause you to hear my words.”
- American Standard Version (ASV)
- Arise, and go down to the potter’s house, and there I will cause thee to hear my words.
- Bible in Basic English (BBE)
- Up! go down to the potter's house, and there I will let my words come to your ears.
- Darby Translation (DBY)
- Arise and go down to the potter's house, and there I will cause thee to hear my words.
- Webster's Bible (WBS)
- Arise, and go down to the potter's house, and there I will cause thee to hear my words.
- Young's Literal Translation (YLT)
- Rise, and thou hast gone down [to] the potter's house, and there I cause thee to hear My words;
Read in context
- 1ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
- 2ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.
- 3ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.
- 4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
Cross references
- Hebrews 1:1 ಇಬ್ರಿಯರಿಗೆ 1:1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Jeremiah 23:22 ಯೆರೆಮೀಯ 23:22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
- Jeremiah 19:1–2 ಯೆರೆಮೀಯ 19:1–2ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
- Jeremiah 13:1 ಯೆರೆಮೀಯ 13:1ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- Amos 7:7 ಆಮೋಸ 7:7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- Ezekiel 4:1–5 ಯೆಹೆಜ್ಕೇಲನು 4:1–5ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು. ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು. ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು. ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.